14 ಸುದ್ದಿ ನಿರೂಪಕರ ಟಿವಿ ಕಾರ್ಯಕ್ರಮ ಬಹಿಷ್ಕರಿಸಲು ನಿರ್ಧರಿಸಿದ ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟ; ಪಟ್ಟಿ ಬಿಡುಗಡೆ

ನವದೆಹಲಿ: ನಿರ್ದಿಷ್ಟ ಸುದ್ದಿ ನಿರೂಪಕರು ನಿರ್ವಹಿಸುವ ಟಿವಿ ಕಾರ್ಯಕ್ರಮಗಳನ್ನ ಬಹಿಷ್ಕರಿಸಲು ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣ ತನ್ನ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಿದ್ದು, ಈಗ ಉಪಸಮಿತಿಯು ತಾವು ಬಹಿಷ್ಕರಿಸಲಿರುವ 14 ಸುದ್ದಿ ನಿರೂಪಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಗುರುವಾರ 14 ಆ್ಯಂಕರ್‌ಗಳ ಪಟ್ಟಿಯನ್ನು ಪ್ರಕಟಿಸಿದ್ದು, ಅವರ ಕಾರ್ಯಕ್ರಮಗಳನ್ನು ವಿರೋಧ ಪಕ್ಷಗಳ ಮೈತ್ರಿಕೂಟವಾದ-ಇಂಡಿಯಾ ಬ್ಲಾಕ್‌ … Continued

ವೀಡಿಯೊ : ಭಾರೀ ಮಳೆ ವೇಳೆ ಮುಂಬೈ ವಿಮಾನ ನಿಲ್ದಾಣದಲ್ಲಿ ರನ್‌ ವೇಯಲ್ಲಿ ಬಿದ್ದ ಖಾಸಗಿ ವಿಮಾನ | ವೀಕ್ಷಿಸಿ

ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಂಟು ಜನರಿದ್ದ ಖಾಸಗಿ ಜೆಟ್ ಗುರುವಾರ ಭಾರೀ ಮಳೆಯ ನಡುವೆ ಲ್ಯಾಂಡ್ ಆಗುತ್ತಿರುವಾಗ ರನ್‌ವೇಯಲ್ಲಿ ಇಳಿಯುವಾಗ ಅಪಘಾತಕ್ಕೀಡಾಗಿದೆ.. ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಕಾರ, ಸಿಬ್ಬಂದಿ ಸೇರಿದಂತೆ ಎಂಟು ಜನರಿಗೆ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಭಾರೀ ಮಳೆಯ ನಂತರ ಕಡಿಮೆ ಗೋಚರತೆಯಿಂದಾಗಿ ವಿಮಾನವು ರನ್‌ … Continued

ಪ್ರಧಾನಿ ಮೋದಿ ಪದವಿ ವಿವಾದ : ಅರವಿಂದ ಕೇಜ್ರಿವಾಲ್, ಸಂಜಯ್ ಸಿಂಗ್ ಸಮನ್ಸ್ ರದ್ದತಿಗೆ ಸೆಷನ್ಸ್ ಕೋರ್ಟ್‌ ನಕಾರ

ಅಹಮದಾಬಾದ್‌ : ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಹಾಜರಾಗಲು ತಮಗೆ ನೀಡಲಾದ ಸಮನ್ಸ್‌ಗಳನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಅವರ ಆಮ್ ಆದ್ಮಿ ಪಕ್ಷದ (ಎಎಪಿ) ಸಹೋದ್ಯೋಗಿ ಮತ್ತು ಸಂಸದ ಸಂಜಯ ಸಿಂಗ್ ಸಲ್ಲಿಸಿದ ಅರ್ಜಿಗಳನ್ನು ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯವು ಗುರುವಾರ ವಜಾಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗಳಿಗೆ ಸಂಬಂಧಿಸಿದಂತೆ ತಮ್ಮ … Continued

ಹಬ್ಬದ ವೇಳೆ ದರ ಹೆಚ್ಚಳ ಮಾಡಿ ಸುಲಿಗೆ ಮಾಡುವ ಖಾಸಗಿ ಬಸ್‌ಗಳ ವಿರುದ್ಧ ಕ್ರಮ : ಸಾರಿಗೆ ಆಯುಕ್ತರ ಎಚ್ಚರಿಕೆ

ಬೆಂಗಳೂರು : ಹಬ್ಬ ಹಾಗೂ ವಿಶೇಷ ಸಂದರ್ಭಗಳಲ್ಲಿ ಹಾಗೂ ವಾರಾಂತ್ಯದಲ್ಲಿ ಖಾಸಗಿ ಬಸ್ಸುಳ ಪ್ರಯಾಣ ದರವನ್ನು ವಿಪರೀತವಾಗಿ ಹೆಚ್ಚಿಸಿ ಪ್ರಯಾಣಿಕರನ್ನು ಸುಲಿಗೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಸಾರಿಗೆ ಆಯುಕ್ತರು ಎಚ್ಚರಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಖಾಸಗಿ ವಾಹನಗಳ ಪ್ರಯಾಣ ದರವನ್ನು ವಿಪರೀತವಾಗಿ ಹೆಚ್ಚಿಸಿ ಸುಲಿಗೆ ಮಾಡುತ್ತಿರುವುದರ ಕುರಿತು ವ್ಯಾಪಕ ದೂರುಗಳಿವೆ. … Continued

ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳು ಬರ ಪೀಡಿತ : ಸರ್ಕಾರ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ. ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಅದರಲ್ಲಿ 161 ತೀವ್ರ ಬರ ಪೀಡಿತ ತಾಲೂಕುಗಳು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ವಿಭಾಗದ ಸರ್ಕಾರದ‌ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ … Continued

ಜ್ಞಾನವಾಪಿ ಪ್ರಕರಣ : ಹಿಂದೂ ಧರ್ಮಕ್ಕೆ ಸಂಬಂಧಿಸಿದ ವಸ್ತುಗಳನ್ನು ಒಪ್ಪಿಸಿ ; ಸಮೀಕ್ಷಾ ತಂಡಕ್ಕೆ ನ್ಯಾಯಾಲಯ ಸೂಚನೆ

ವಾರಾಣಸಿ : ಜ್ಞಾನವಾಪಿ ಮಸೀದಿ ಆವರಣದ ವೀಡಿಯೊಗ್ರಫಿ ನಡೆಸುತ್ತಿರುವ ಸಮೀಕ್ಷಾ ತಂಡದವರಿಗೆ ಸಮೀಕ್ಷೆಯ ವೇಳೆ ಪತ್ತೆಯಾಗಿರುವ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಎಲ್ಲಾ ವಸ್ತುಗಳನ್ನು ಸಂರಕ್ಷಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸುವಂತೆ ವಾರಾಣಸಿ ಜಿಲ್ಲಾ ನ್ಯಾಯಾಲಯವು ಸೂಚಿಸಿದೆ. ಎಎಸ್ಐ ಸಮೀಕ್ಷೆಯ ಸಮಯದಲ್ಲಿ ಕಂಡುಬರುವ ಹಿಂದೂ ಧರ್ಮಕ್ಕೆ ಮತ್ತು ಆರಾಧಾನ ಪದ್ಧತಿಗೆ ಅಥವಾ ಐತಿಹಾಸಿಕ ಅಥವಾ ಪುರಾತತ್ವದ ಹಿನ್ನೆಲೆಯಿಂದ ಈ … Continued

ದೇವಾಲಯಗಳ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ನಿಷೇಧಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು : ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳ ಸುತ್ತಲೂ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಗಳಂತಹ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರವೇ ಅಂಕುಶ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿದೆ. ‘ಧರ್ಮ’ ಎಂದರೆ ಮನುಷ್ಯನಿಗೆ ಅಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ. ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, … Continued

ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಸನಾತನ ಧರ್ಮವನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ : ಪ್ರಧಾನಿ ಮೋದಿ ವಾಗ್ದಾಳಿ

ಸಾಗರ : ಪ್ರತಿಪಕ್ಷಗಳ ಮೈತ್ರಿಕೂಟದ ವಿರುದ್ಧ ಗುರುವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಮೈತ್ರಿಕೂಟವು ‘ಸನಾತನ ಧರ್ಮ’ಕ್ಕೆ ಹಾಗೂ ದೇಶದ ಸಂಸ್ಕೃತಿ ಮತ್ತು ನಾಗರಿಕರಿಗೆ ಅಪಾಯವನ್ನುಂಟುಮಾಡುತ್ತಿದೆ ಎಂದು ಆರೋಪಿಸಿದರು. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು “ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ” ಹೇಳಿಕೆಯ ನಂತರ ವಿವಾದ ಭುಗಿಲೆದ್ದಿದೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ … Continued

ಎಸ್‌ಬಿಐ ಪ್ರೊಬೇಷನರಿ ಆಫೀಸರ್‌ಗಳ ನೇಮಕಾತಿ : 2000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾವು 2000 ಪ್ರೊಬೇಷನರಿ ಆಫೀಸರ್ ಹುದ್ದೆಗಳನ್ನು ಭರ್ತಿಗೆ ಪ್ರಕಟಣೆ ಹೊರಡಿಸಿದೆ. ಯಾವುದೇ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನವಾಗಿದೆ. 2000 ಎಸ್‌ಬಿಐ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಪೈಕಿ ಎಸ್‌ಸಿ -300, ಎಸ್‌ಟಿ – 150, ಒಬಿಸಿ-540, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ … Continued

ನಿಪಾ ವೈರಸ್: ಕೇರಳದ ಕೋಝಿಕ್ಕೋಡ್‌ನಲ್ಲಿ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

ಕೋಝಿಕ್ಕೋಡ್ : ಕೇರಳದಲ್ಲಿ ಕೋಝಿಕ್ಕೋಡಿನಲ್ಲಿ ʼನಿಪಾʼ ವೈರಸ್‌ ಹರಡಿದ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಕೋಝಿಕೋಡ್‌ನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕೋಝಿಕ್ಕೋಡ್ ಜಿಲ್ಲಾಧಿಕಾರಿ ಎ. ಗೀತಾ ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ರಜೆ ಘೋಷಿಸಿದ್ದು, ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಎರಡು ದಿನಗಳಲ್ಲಿ ಆನ್‌ಲೈನ್ ತರಗತಿಗಳನ್ನು ನಡೆಸಬಹುದು ಎಂದು ಹೇಳಿದ್ದಾರೆ. ಆದರೆ, ವಿಶ್ವವಿದ್ಯಾನಿಲಯದ ಪರೀಕ್ಷಾ ವೇಳಾಪಟ್ಟಿಯಲ್ಲಿ … Continued