ದೇವಾಲಯಗಳ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ನಿಷೇಧಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು : ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳ ಸುತ್ತಲೂ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಗಳಂತಹ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರವೇ ಅಂಕುಶ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿದೆ. ‘ಧರ್ಮ’ ಎಂದರೆ ಮನುಷ್ಯನಿಗೆ ಅಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ. ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾಗುತ್ತದೆ ಎಂದು ಹೇಳಿದೆ.

ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ನಮ್ಮ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದೆ. ಈ ನಿಯಮ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ 33 ಸಾವಿರ ದೇವಾಲಯಗಳಿಗೂ ಅನ್ವಯ ಆಗಲಿದೆ.

ದೇವಾಲಯಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟ ಹೆಚ್ಚಾಗಿದ್ದು, ಗುಟ್ಕಾ ತಿಂದು ಕಾಂಪೌಂಡ್ ಸುತ್ತಮುತ್ತ ಉಗಿಯುತ್ತಿರುವ ಬಗ್ಗೆ ಸಾರ್ವಜನಿಕರ ದೂರುಗಳ ನಂತರ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್ ಬಳಕೆಗೆ ನಿಷೇಧ ವಿದ್ಧರೂ ನಿಯಮ ಅನುಸರಿಸದ ಕಾರಣ, ಸರ್ಕಾರ ಈ ನಿಯಮ ಜಾರಿಗೆ ಚಿಂತನೆ ನಡೆಸಿದೆ ಎನ್ನಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಬೆಂಗಳೂರು ಬಂದ್‌ : ಶಾಲೆ-ಕಾಲೇಜಿಗಳಿಗೆ ರಜೆ ಘೋಷಣೆ

 

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement