ಬೆಂಗಳೂರು : ರಾಜ್ಯದಲ್ಲಿ 161 ತಾಲ್ಲೂಕುಗಳು ತೀವ್ರ ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ರಾಜ್ಯದ 195 ತಾಲೂಕುಗಳು ಬರ ಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ನಂತರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ. ಅದರಲ್ಲಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಯಾವುದೇ ಮೊದಲು ಅಲ್ಲಿಯವರೆಗೂ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. (ಬರ ಪೀಡಿತ ತಾಲೂಕುಗಳ ಪಟ್ಟಿಗಾಗಿ ಇಲ್ಲಿ Drought talukas list ಕ್ಲಿಕ್ ಮಾಡಿ)
ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸೂಚಿಸಿದ್ದು, ಕಾಲ ಕಾಲಕ್ಕೆ ಎಸ್ಡಿಆರ್ಎಫ್, ಎನ್ಡಿಆರ್ಎಫ್ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ