ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೆಪ್ಟೆಂಬರ್ 23ರ ವರೆಗೆ ಸಿಸಿಬಿ ಪೊಲೀಸರ ಕಸ್ಟಡಿಗೆ

ಬೆಂಗಳೂರು: ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯ ಅವರನ್ನು 10 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿದೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಆರು ಜನರನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ, ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ಆದೇಶಿಸಿದೆ.
ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದು, ಬೆಂಗಳೂರಿಗೆ ಕರೆತಂದಿದ್ದರು. ನ್ಯಾಯಾಲಯಕ್ಕೆ ಜಾರುಪಡಿಸಿದ ನಂತರ ಈ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ ನಡೆಸಬೇಕಿರುವ ಹಿನ್ನೆಲೆಯಲ್ಲಿ ಚೈತ್ರಾ ಅವರನ್ನು ಕಸ್ಟಡಿಗೆ ನೀಡುವಂತೆ ಸಿಸಿಬಿ ಪೊಲೀಸರು ಕೋರಿದ್ದರು. ಕೋರ್ಟ್‌ ಚೈತ್ರಾ ಅವರನ್ನು ಕಸ್ಟಡಿಗೆ ಒಪ್ಪಿಸಿದೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಕೊಡಿಸುತ್ತೇವೆಂದು ನಂಬಿಸಿ ಉದ್ಯಮಿಯೊಬ್ಬರ ಬಳಿ 5 ಕೋಟಿ ರೂ. ಪಡೆದು ವಂಚಿಸಿದ ಆರೋಪದ ಮೇರೆಗೆ ಹಿಂದೂಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ ಸೇರಿದಂತೆ ಆರು ಮಂದಿಯನ್ನು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದರು.
ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಕೊಡಿಸುವ ಭರವಸೆ ನೀಡಿ ಆರೋಪಿಗಳಾದ ಚೈತ್ರಾ ಮತ್ತು ಇತರರು 5 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂಬುದು ಆರೋಪವಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಹೈದರಾಬಾದ್-ಬೆಂಗಳೂರು ವಂದೇ ಭಾರತ ರೈಲು ಸೆಪ್ಟೆಂಬರ್ 25 ರಿಂದ ಆರಂಭ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3.7 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement