ಹಬ್ಬದ ವೇಳೆ ದರ ಹೆಚ್ಚಳ ಮಾಡಿ ಸುಲಿಗೆ ಮಾಡುವ ಖಾಸಗಿ ಬಸ್‌ಗಳ ವಿರುದ್ಧ ಕ್ರಮ : ಸಾರಿಗೆ ಆಯುಕ್ತರ ಎಚ್ಚರಿಕೆ

ಬೆಂಗಳೂರು : ಹಬ್ಬ ಹಾಗೂ ವಿಶೇಷ ಸಂದರ್ಭಗಳಲ್ಲಿ ಹಾಗೂ ವಾರಾಂತ್ಯದಲ್ಲಿ ಖಾಸಗಿ ಬಸ್ಸುಳ ಪ್ರಯಾಣ ದರವನ್ನು ವಿಪರೀತವಾಗಿ ಹೆಚ್ಚಿಸಿ ಪ್ರಯಾಣಿಕರನ್ನು ಸುಲಿಗೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಸಾರಿಗೆ ಆಯುಕ್ತರು ಎಚ್ಚರಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಖಾಸಗಿ ವಾಹನಗಳ ಪ್ರಯಾಣ ದರವನ್ನು ವಿಪರೀತವಾಗಿ ಹೆಚ್ಚಿಸಿ ಸುಲಿಗೆ ಮಾಡುತ್ತಿರುವುದರ ಕುರಿತು ವ್ಯಾಪಕ ದೂರುಗಳಿವೆ. ಅದರಲ್ಲೂ ವಾಹನಗಳ ಮಾಲೀಕರು, ಆನ್ಲೈನ್ ಟಿಕೆಟ್ ವಿತರಕರು ವಾರಾಂತ್ಯ ಹಬ್ಬ ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣ ದರವನ್ನು ವಿಪರೀತವಾಗಿ ಹೆಚ್ಚಿಸುತ್ತಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.

ನಿಯಮಬಾಹಿರವಾದ ಈ ನಡೆ ಮುಂದಿನ ದಿನಗಳಲ್ಲಿ ಕಂಡುಬಂದರೆ ಅನ್ಲೈನ್ ಟಿಕೆಟ್ ವಿತರಕರ ಮತ್ತು ವಾಹನಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಇದೇ ತಿಂಗಳ 17 ಹಾಗೂ 18 ರಂದು ಗೌರಿ ಗಣೇಶ ಹಬ್ಬವಿದ್ದು, ಬಹಳಷ್ಟು ಮಂದಿ ಊರುಗಳಿಗೆ ಪ್ರಯಾಣಿಸಲಿದ್ದಾರೆ. ಈ ಸಂದರ್ಭದಲ್ಲಿ ಟಿಕೆಟ್ ದರ ಹೆಚ್ಚಳ ಮಾಡುವ ನಿರೀಕ್ಷೆಗಳಿರುವುದರಿಂದ ಸಾರಿಗೆ ಇಲಾಖೆ ಮುಂಜಾಗ್ರತೆಯಾಗಿ ಸೂಚನೆ ನೀಡಿದ್ದು, ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ 7 ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೆ ಮಳೆ ಅಬ್ಬರ ; ಉಳಿದ ಜಿಲ್ಲೆಗಳಲ್ಲಿ ಚುರುಕು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement