ತಿರುಪತಿ ಬಳಿ ಭೀಕರ ರಸ್ತೆ ಅಪಘಾತ : ಬೆಳಗಾವಿ ಜಿಲ್ಲೆಯ ಐವರು ಸಾವು, 11 ಮಂದಿಗೆ ಗಾಯ

ಹೈದರಾಬಾದ್‌/ ಬೆಳಗಾವಿ : ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಕನಿಷ್ಠ ಐವರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಘಟನೆ ಆಂಧ್ರದ ಅನ್ನಮಯ್ಯ ಜಿಲ್ಲೆಯ ಕೆವಿಪಲ್ಲಿ ತಾಲೂಕಿನ ಮಠಂಪಲ್ಲಿಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿ ಮುಂದಿನ ಭಾಗ ನಜ್ಜುಗುಜ್ಜಾಗಿದ್ದರೆ, ಕ್ರೂಸರ್‌ ಸಂಪೂರ್ಣ ನಜ್ಜುಗುಜ್ಜಾಗಿದೆ. ಮಠಂಪಲ್ಲೆ ಗ್ರಾಮದ ಬಳಿ ಲಾರಿ ಹಾಗೂ ಜೀಪ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಐವರು ಭಕ್ತರು ಮೃತಪಟ್ಟಿದ್ದಾರೆ ಹಾಗೂ 11 ಮಂದಿ ಗಾಯಗೊಂಡಿದ್ದಾರೆ.

ಕ್ರೂಸರ್ ವಾಹನದಲ್ಲಿ 16 ಜನರು ಪ್ರಯಾಣಿಸುತ್ತಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಬಡಚಿ ಗ್ರಾಮದವರು ಎಂದು ಹೇಳಲಾಗಿದೆ.
ಪೊಲೀಸರ ಪ್ರಕಾರ, ಕರ್ನಾಟಕದ ಬೆಳಗಾವಿ ಜಿಲ್ಲೆಯ ಭಕ್ತಾದಿಗಳ ಗುಂಪು ತಿರುಪತಿಯ ತಿರುಮಲ ದೇವಸ್ಥಾನದಲ್ಲಿ ‘ದರ್ಶನ’ ಮುಗಿಸಿ ಊರಿಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮೃತರನ್ನು ಶೋಭಾ (36), ಅಂಬಿಕಾ (14), ಚಾಲಕ ಹನುಮಂತು (45), ಮಾನಂದ (35) ಮತ್ತು ಹನುಮಂತ (38) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇತರ 11 ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಪೊಲೀಸರು ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ರುಯಾ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಕೆಲವರ ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement