ಬೆಂಗಳೂರು : ಕೊಡಗು ಹಾಗೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 21ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರವರೆಗೂ ಮಳೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 16ರಂದುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 18ರ ವರೆಗೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ