ಬೆಂಗಳೂರು : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಅವರು ಸಿಸಿಬಿ ವಿಚಾರಣೆ ವೇಳೆ ಕುಸಿದು ಬಿದ್ದಿದ್ದಾರೆ ಎನ್ನಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಇಂದು, ಶುಕ್ರವಾರ ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾ ಅವರನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತರಲಾಗಿತ್ತು. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ. , ಈ ವೇಳೆ ಕುಸಿದು ಬಿದ್ದ ಚೈತ್ರಾರನ್ನು ಸ್ಟ್ರೆಚರ್ ತಂದು ಆಸ್ಪತ್ರೆ ಸಿಬ್ಬಂದಿ ಕರೆದೊಯ್ದಿದ್ದಾರೆ.
ವಿಚಾರಣೆ ವೇಳೆ ಮೂರ್ಛೆ ಹೋದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.
ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿಯಿಂದ ಎಂಎಲ್‌ಎ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಬಂಧಿತಳಾಗಿದ್ದಾಳೆ.
ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಂದ ಐದು ಕೋಟಿ ರೂ. ಪಡೆದು ವಂಚಿಸಿರುವ ಬಗ್ಗೆ ಚೈತ್ರಾ ಕುಂದಾಪುರ ಸಹಿತ ಏಳು ಮಂದಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದ್ದು, ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ