ಎಸ್‌ ಬಿಐನಲ್ಲಿ 6160 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು ; ಸೆಪ್ಟೆಂಬರ್ 21 ಕೊನೆಯ ದಿನ

ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ (State Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6160 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇದೇ ಸೆಪ್ಟೆಂಬರ್ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಕರ್ನಾಟಕದಲ್ಲಿ 175 ಹುದ್ದೆಗಳು ಖಾಲಿ ಇವೆ.
ಸಂಸ್ಥೆ-ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ
ಹುದ್ದೆ-ಅಪ್ರೆಂಟಿಸ್
ವಿದ್ಯಾರ್ಹತೆ-ಪದವಿ
ಒಟ್ಟು ಹುದ್ದೆ-6160
ಮಾಸಿಕ ಸಂಬಳ-₹ 15,000
ಉದ್ಯೋಗದ ಸ್ಥಳ- ಅಖಿಲ ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನ-ಸೆಪ್ಟೆಂಬರ್ 21, 2023

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/09/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 21, 2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಸೆಪ್ಟೆಂಬರ್ 21, 2023
ಅಧಿಸೂಚನೆ ನೋಡಲು SBI-Recruitment-2023- Notification   ಇಲ್ಲಿ ಕ್ಲಿಕ್‌ ಮಾಡಬಹುದು…
ವಿದ್ಯಾರ್ಹತೆ: ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2023ಕ್ಕೆ ಕನಿಷ್ಠ 20 ವರ್ಷ ಆಗಿರಬೇಕು ಮತ್ತು ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ: ಸಾಮಾನ್ಯ/EWS/OBC ಅಭ್ಯರ್ಥಿಗಳು- 300 ರೂ. ಹಾಗೂ SC/ ST/ PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.

ಪ್ರಮುಖ ಸುದ್ದಿ :-   ನಾಗಮಂಗಲ‌ ಗಲಭೆ : ಆರ್ ಅಶೋಕ, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ ಐ ಆರ್‌

ಪಾವತಿಸುವ ವಿಧಾನ- ಆನ್​ಲೈನ್
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು https://ibpsonline.ibps.in/sbiaaug23/   ಇಲ್ಲಿ ಕ್ಲಿಕ್ ಮಾಡಬಹುದು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಥಳೀಯ ಭಾಷಾ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement