ಕಲಬುರಗಿ : ರಾಜ್ಯ ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ ಮಾಡುವ ವಿಚಾರ ಪಕ್ಷದ ಹೈಕಮಾಂಡ್ ಮುಂದೆ ಇಲ್ಲ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕಾದರೇ ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ನಾನು ಭಾವಿಸಿದಂತೆ ಮೂರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ ವಿಚಾರ ಹೈಕಮಾಂಡ್ ಮುಂದೆ ಇಲ್ಲ ಎಂದು ಹೇಳಿದ್ದಾರೆ.
ಮೂರು ಜನ ಉಪಮುಖ್ಯಮಂತ್ರಿಗಳನ್ನು ಮಾಡಬೇಕು ಎಂಬ ಹೇಳಿಕೆ ಅದು ರಾಜಣ್ಣ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಎಲ್ಲರಿಗೂ ಹೈಕಮಾಂಡ್ ಮುಂದೆ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ. ಹೀಗಾಗಿ, ಮೂವರು ಉಪಮುಖ್ಯಮಂತ್ರಿ ಎಂದಾದರೂ ಹೇಳಲಿ ಐವರು ಉಪಮುಖ್ಯಮಂತ್ರಿಗಳು ಎಂದಾದರೂ ಹೇಳಲಿ, ಅದು ಅವರು ಹೈಕಮಾಂಡ್ ಮುಂದೆ ಇಡಲು ಸ್ವತಂತ್ರರಿದ್ದಾರೆ. ಆದರೆ, ನಾನು ಭಾವಿಸಿದಂತೆ ಹೈಕಮಾಂಡ್ ಮುಂದೆ ಇಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದ್ದಾರೆ
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ