ಮಳೆ ಕೊರತೆ : ಬೆಳಗಾವಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಸರ್ಕಾರದ ಅನುಮತಿ

ಬೆಳಗಾವಿ : ಜಿಲ್ಲೆಯ ಬೆಳಗಾವಿ ಹಾಗೂ ಖಾನಾಪುರ ತಾಲೂಕುಗಳನ್ನು ಹೊರತುಪಡಿಸಿ ಜಿಲ್ಲೆಯ ಉಳಿದ ಎಲ್ಲ ತಾಲೂಕುಗಳಲ್ಲಿ ಈ ಬಾರಿ ಮಳೆಯ ತೀವ್ರ ಅಭಾವ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಎರಡು ತಾಲೂಕುಗಳನ್ನು ಹೊರತುಪಡಿಸಿ ಉಳಿದ ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿದೆ.
ಮಳೆಯ ತೀವ್ರ ಅಭಾವ ಎದುರಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಚಿಂತನೆ ನಡೆಸಲಾಗಿದೆ.
ಬೆಂಗಳೂರಿನ ಕ್ಯಾತಿ ಕ್ಲೈಮೇಟ್ ಮೋಡಿಫಿಕೇಶನ್ ಕನ್ಸಲ್ಟನ್ಸಿ ಮತ್ತು ಬೆಳಗಾವಿ ಶುಗರ್ಸ್ ಜಂಟಿಯಾಗಿ ಮೋಡ ಬಿತ್ತನೆಗೆ ಮುಂದಾಗಿವೆ.
ಲೋಕೋಪಯೋಗಿ ಖಾತೆ ಖಾತೆ ಸಚಿವ ಸತೀಶ ಜಾರಕಿಹೊಳಿಯವರು ಕ್ಯಾತಿ ಕ್ಲೈಮೇಟ್ ಮೋಡಿಫಿಕೇಶನ್ ಕನ್ಸಲ್ಟನ್ಸಿ ಜೊತೆ ಮಾತುಕತೆ ನಡೆಸಿ ಆ ಮೂಲಕ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.
ಇದಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಅನುಮತಿ ನೀಡಿದೆ. ಸಕ್ಷಮ ಪ್ರಾಧಿಕಾರದಿಂದ ನಿಯಮಾನುಸಾರ ಅನುಮತಿ ಪಡೆದು ಮೋಡ ಬಿತ್ತನೆ ಕೈಗೊಳ್ಳಲು ಅನುಮತಿ ನೀಡಿದೆ. ಜಿಲ್ಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಜಿಲ್ಲೆಯಲ್ಲಿ ಮೋಡ ಬಿತ್ತನೆ ನಡೆಯಲಿದೆ. ನಂತರ ಜಿಲ್ಲಾಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ವರದಿ ಸಲ್ಲಿಸಬೇಕಾಗಿದೆ.
ಜಿಲ್ಲೆಯ ಯಾವ ಭಾಗದಲ್ಲಿ, ಯಾವ ಸಮಯದಲ್ಲಿ ಮೋಡ ಬಿತ್ತನೆ ಮಾಡಬೇಕು ಎಂಬುದನ್ನು ನೋಡಿಕೊಂಡು ಮೋಡಗಳ ಅವಲಂಬನೆ ಆಧರಿಸಿ ಮೋಡ ಬಿತ್ತನೆ ತಾಂತ್ರಿಕ ಕಾರ್ಯ ಕೈಗೊಂಡು ಮೋಡ ಬಿತ್ತನೆ ಮಾಡಲಾಗುತ್ತದೆ.
ಇದಕ್ಕೂ ಮೊದಲು ಈ ತಿಂಗಳ ಆರಂಭದಲ್ಲಿ ಪಿಕೆಕೆ ಲಿಮಿಟೆಡ್‌ ಸಂಸ್ಥೆಯಿಂದ ರಾಣೆಬೆನ್ನೂರು ಶಾಸಕ ಪ್ರಕಾಶ್‌ ಕೋಳಿವಾಡ ಅವರು ಸ್ವಂತ ಖರ್ಚಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕೈಗೊಂಡಿದ್ದರು.

ಪ್ರಮುಖ ಸುದ್ದಿ :-   ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement