ಸಚಿವ ಮಧು ಬಂಗಾರಪ್ಪ ಬೆಂಬಲಿಗರಿಂದ ನನಗೆ ಜೀವ ಬೆದರಿಕೆ: ಪ್ರಣವಾನಂದ ಸ್ವಾಮೀಜಿ ಆರೋಪ

ಬೆಂಗಳೂರು : ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಅವರು ತಮಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ಜೀವ ಬೆದರಿಕೆ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, “ಮಧು ಬಂಗಾರಪ್ಪ ಬೆಂಬಲಿಗರು ಕರೆ ‌ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಪೊಲೀಸ್ ‌ಕಮಿಷನರ್ ಭೇಟಿ ಮಾಡಿ, ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತೇನೆ ಎಂದು ಹೇಳಿದ್ದಾರೆ.
ಬಿ.ಕೆ. ಹರಿಪ್ರಸಾದ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ತಪ್ಪೇನಿದೆ? ಹಾಗಾದರೆ ಬೇರೆ ಸಮುದಾಯದವರು ಹೋರಾಟ ‌ಮಾಡಿಲ್ಲವೇ ? ಈಡಿಗ ಸಮುದಾಯಕ್ಕೆ ಮಧು ಬಂಗಾರಪ್ಪ ಕೊಡುಗೆ ಏನು ಎಂದು ಪ್ರಶ್ನಿಸಿದ ಅವರು ಈಡಿಗ ಸಮುದಾಯವನ್ನು ಸರ್ಕಾರವೇ ಒಡೆಯುವ ಕೆಲಸ ಮಾಡುತ್ತಿದೆ. ಸ್ವಾಮೀಜಿಗಳ ವಿರುದ್ಧ ಎತ್ತಿ ಕಟ್ಟುವ ಕೆಲಸ ನಡೆಯುತ್ತಿದೆ. ನಾನು ಸಮುದಾಯದ ಭೂಮಿ ಕೊಳ್ಳೆ ಹೊಡೆದಿಲ್ಲ. ಸೈಟ್ ಮಾಡಿ ಮಾರಾಟ ಮಾಡಿಲ್ಲ. ಬಿ ಕೆ ಹರಿಪಸ್ರಾದ್ ಭೂಮಿ ಕಳ್ಳತನ ಮಾಡಿದವರಲ್ಲ ಎಂದು ಸ್ವಾಮೀಜಿ ಹೇಳಿದರು.

ನಾನು ಸ್ವಾಮೀಜಿ ಅಲ್ಲ ಎಂದು ಹೇಳಲು ಅವರಿಗೆ ಹಕ್ಕು ಕೊಟ್ಟವರು ಯಾರು. ಸಮುದಾಯಕ್ಕೆ ಅನ್ಯಾಯವಾದರೆ ಅದಕ್ಕೆ ನೀವೇ ಹೊಣೆಯಾಗಬೇಕಾಗುತ್ತದೆ ಎಂದ ಅವರು, ಈಗ ಜೆಡಿಎಸ್​ನಿಂದ ಕಾಂಗ್ರೆಸ್ಸಿಗೆ ಬಂದಿದ್ದೀರಾ. ಮುಂದೆ ಯಾವ ಪಕ್ಷಕ್ಕೆ ಹೋಗುತ್ತೀರಾ ಎಂಬುದು ಗೊತ್ತಿಲ್ಲ” ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಧು ಬಂಗಾರಪ್ಪ ಮಾತಿಗೆ ಕಡಿವಾಣ ಹಾಕಬೇಕು. ಸ್ಪೀಕರ್ ಭೇಟಿ ಮಾಡಿ ಮಧು ಬಂಗಾರಪ್ಪ ವಿರುದ್ಧ ದೂರು ಕೊಡುತ್ತೇವೆ. ನಾವು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ” ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದರು.
ಯಾರಿಗೆ ಬೇಕಾದರೂ ದೂರು‌ ಕೊಡಲಿ: ಮಧು ಬಂಗಾರಪ್ಪ
ಪ್ರಣವಾನಂದ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಮಧು ಬಂಗಾರಪ್ಪ ಅವರು, “ಪ್ರಣವಾನಂದ ಸ್ವಾಮೀಜಿ ಅವರು ಇಂತಹ ಬುರುಡೆಗಳನ್ನ ಬಿಟ್ಟುಕೊಂಡೇ ಬಂದಿದ್ದಾರೆ. ಪ್ರಣವಾನಂದ ಶ್ರೀಗಳು ನಮ್ಮ ಸಮಾಜದವರೇ ಅಲ್ಲ. ಅವರ ಹಿನ್ನೆಲೆ ಕೆದಕಿ ನಿಮಗೆ ಗೊತ್ತಾಗುತ್ತದೆ. ನನ್ನ ವಿರುದ್ಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ, ಸ್ಪೀಕರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಸೇರಿ ಯಾರಿಗೆ ಬೇಕಾದರೂ ದೂರು‌ ಕೊಡಲಿ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement