ಬೆಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿಯ ಪುನೀತ ಅವರು, ಬೆಂಗಳೂರಿನಲ ಜೆಪಿ ನಗರ 7ನೇ ಹಂತದಲ್ಲಿ ವಾಸವಿದ್ದರು. ಅವರ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು.
ಅಪರಾಧ ಪ್ರಕರಣಗಳಲ್ಲಿ ಪದೇ ಪದೆ ಭಾಗಿಯಾಗುತ್ತಿರುವುದರಿಂದ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಕಳೆದ ಆಗಸ್ಟ್‌ನಲ್ಲಿ ಪುನೀತ ಕೆರೆಹಳ್ಳಿ ವಿರುದ್ಧ ಸರ್ಕಾರವು ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿತ್ತು ಮತ್ತು ಸಿಸಿಬಿ ಪೊಲೀಸರು ಆತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿತ್ತು.
ತನ್ನ ಬಂಧನ ಅಕ್ರಮವೆಂದು ಆರೋಪಿಸಿ ಪುನೀತ ಕೆರೆಹಳ್ಳಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು. ಸಮಿತಿಯು ವರದಿಯಲ್ಲಿ ಈ ‘ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ’ ಎಂದು ಹೇಳಿದೆ.
ಈ ವರದಿಯ ಅನ್ವಯ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಆದೇಶ ಹೊರಡಿಸಿರುವ ಒಳಾಡಳಿತ ಇಲಾಖೆಯ(ಕಾನೂನು & ಸುವ್ಯವಸ್ಥೆ) ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್, ಪುನೀತ್ ಕೆರೆಹಳ್ಳಿಯನ್ನು ಬಂಧನ ಮುಕ್ತಗೊಳಿಸುವಂತೆ ಸೂಚಿಸಿದ್ದಾರೆ. ಈ ಆದೇಶದ ಬೆನ್ನಲ್ಲೇ ಪುನೀತ್ ಕೆರೆಹಳ್ಳಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ. ಗೂಂಡಾ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ರದ್ದುಪಡಿಸಿದ ಮೊದಲ ಪ್ರಕರಣ ಇದಾಗಿದೆ ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ