ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ‘ಜನತಾ ದರ್ಶನ’ : ಸೆ.25ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಚಾಲನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಇನ್ಮುಂದೆ ಜಿಲ್ಲೆಗಳಲ್ಲಿ ‘ಜನತಾ ದರ್ಶನ’ ನಡೆಸಲಾಗುತ್ತದೆ. ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ ಗೋಯಲ್ ಈ ಕುರಿತು ಟಿಪ್ಪಣಿ ಹೊರಡಿಸಿದ್ದಾರೆ.
ಎಲ್ಲಾ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳು/ ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಕಾಧಿಕಾರಿಗಳು/ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿಗಳಿಗೆ ಈ ಟಿಪ್ಪಣೆ ರವಾನಿಸಲಾಗಿದೆ.
ರಾಜ್ಯದ ವಿವಿಧ ಭಾಗಗಳಿಂದ ಜನರು ಬೆಂಗಳೂರಿಗೆ ಆಗಮಿಸಿ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ. ಇದನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ‘ ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವುದು ಸೂಕ್ತವಾಗಿರುತ್ತದೆ ಎಂದು ಟಿಪ್ಪಣೆ ಹೇಳಿದೆ.

ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರ ನೇತೃತ್ಯದಲ್ಲಿ ಸೆಪ್ಟೆಂಬರ್‌ 25ರಂದು ಏಕಕಾಲದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಟಾಚಾರದಂತೆ ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸೂಚಿಸಿದ್ದಾರೆ.
ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜವಾಬ್ದಾರಿಯುತವಾಗಿ ಜನತಾ ದರ್ಶನ ನಡೆಸುವ ಕುರಿತು ಸೂಕ್ತ ಕ್ರಮವಹಿಸಲು ಟಿಪ್ಪಣಿಯಲ್ಲಿ ಸೂಚನೆ ನೀಡಲಾಗಿದೆ. ಜಿಲ್ಲಾಡಳಿತವು ಆಯಾ ಜಿಲ್ಲೆಯ ಜನರಿಗೆ ‘ಜನತಾ ದರ್ಶನ’ ನಡೆಯುವ ಸ್ಥಳ, ವೇಳೆ ಇತ್ಯಾದಿಗಳನ್ನು ಜಾಹೀರಾತು ಮುಖಾಂತರ ಮುಂಚಿತವಾಗಿಯೇ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲೂಕನ್ನು ಆಯ್ಕೆ ಮಾಡಿಕೊಂಡು ತಾಲ್ಲೂಕು ಮಟ್ಟದಲ್ಲಿ ‘ಜನತಾ ದರ್ಶನ’ ಕಾರ್ಯಕ್ರಮವನ್ನು ನಡೆಸುವುದು ಎಂದು ನಿರ್ದೇಶಿಸಲಾಗಿದೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿ. ಆ. ಸು. ಇ (ಇ-ಆಡಳಿತ) ಜಿಲ್ಲಾ ಇ-ಆಫೀಸ್ ಸಮಾಲೋಚಕರನ್ನು ಈ ಕಾರ್ಯಕ್ಕೆ ಬಳಸಿಕೊಳ್ಳುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಯೋಜನಾ ನಿರ್ದೇಶಕರ ಕಚೇರಿಯನ್ನು ದೂರವಾಣಿ ಸಂಖ್ಯೆ 080-22340369 ಮೂಲಕ ಸಂಪರ್ಕಿಸಲು ಸೂಚಿಸಿದೆ.

ಇಂದಿನ ಪ್ರಮುಖ ಸುದ್ದಿ :-   ₹2000 ನೋಟು ಬದಲಾವಣೆಗೆ 5 ದಿನ ಮಾತ್ರ ಬಾಕಿ ಇದೆ...

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement