ಪ್ರಜ್ವಲ್​​ ರೇವಣ್ಣಗೆ ತಾತ್ಕಾಲಿಕ ರಿಲೀಫ್​ : ಸಂಸದ ಸ್ಥಾನ ಅನರ್ಹಗೊಳಿಸಿದ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ಪ್ರಜ್ವಲ್ ರೇವಣ್ಣ ಲೋಕಸಭೆಯಲ್ಲಿ ಜೆಡಿಎಸ್‌ನ ಏಕೈಕ ಸಂಸದ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಇಂದು, ಸೋಮವಾರ (ಸೆಪ್ಟೆಂಬರ್ 18)) ಅವರ 2019 ರ ಚುನಾವಣೆಯನ್ನು ರದ್ದುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಆದಾಗ್ಯೂ, ಪ್ರಜ್ವಲ್ ಅವರು ಸಂಸದರಾಗಿ ಯಾವುದೇ ಸವಲತ್ತುಗಳು ಅಥವಾ ಭತ್ಯೆಗಳನ್ನು ಪಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೆಪ್ಟೆಂಬರ್ 1ರಂದು ಕರ್ನಾಟಕ ಹೈಕೋರ್ಟ್ ತನ್ನ ಲೋಕಸಭಾ ಸದಸ್ಯತ್ವವನ್ನು ಅನೂರ್ಜಿತಗೊಳಿಸಿದ್ದನ್ನು ಪ್ರಶ್ನಿಸಿ ಪ್ರಜ್ವಲ  ರೇವಣ್ಣ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಸಿದ್ದಾರೆ, ಹೀಗಾಗಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಜಯಗೊಂಡಿದ್ದ ಅಂದಿನ ಬಿಜೆಪಿಯ ಎ.ಮಂಜು ಹಾಗೂ ದೇವರಾಜೇಗೌಡ ಎಂಬುವವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.
ಆದಾಯ ತೆರಿಗೆ ವಿವರಗಳಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ದಾಖಲೆಗಳಲ್ಲಿ ಸುಳ್ಳು ಅಂಕಿ ಅಂಶಗಳಿಂದ ಕೂಡಿದೆ ಎಂದು ದೂರುದಾರರು ಆರೋಪಿಸಿದ್ದರು. ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ನ್ಯಾಯಮೂರ್ತಿ ಕೆ.ನಟರಾಜನ್​ ಅವರಿದ್ದ ಪೀಠವು ಸೆ.1ರಂದು ಸಂಸತ್​ ಸದಸ್ಯತ್ವದಿಂದ ಪ್ರಜ್ವಲ್​ ರೇವಣ್ಣರನ್ನು ಅನರ್ಹಗೊಳಿಸಿ ತೀರ್ಪು ನೀಡಿತ್ತು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement