ಹಣಕ್ಕಾಗಿ ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿ ಅರಣ್ಯದಲ್ಲಿ ಶವ ಎಸೆದಿದ್ದ ಮೂವರು ಆರೋಪಿಗಳ ಬಂಧನ

ಶಿರಸಿ: ಹಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕೊಲೆಗೈದು ಶವವನ್ನು ಗೋಣಿ ಚೀಲದಲ್ಲಿ ತುಂಬಿ ಎಸೆದು ಹೋಗಿದ್ದ ಮೂವರು ಆರೋಪಿಗಳನ್ನು ಬನವಾಸಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಹಣಕ್ಕಾಗಿ ಕೊಲೆಗೈದು ಬಳಿಕ ಶವವನ್ನು ತಾಲೂಕಿನ ಕೊರ್ಲಕಟ್ಟಾ – ವಡ್ಡಿನಕೊಪ್ಪ ರಸ್ತೆಯ ಅರಣ್ಯದಲ್ಲಿ ಎಸೆದು ಹೋಗಿದ್ದರು. ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಪತ್ತೆಯಾದ 24 ಗಂಟೆಗಳ ಒಳಗೆ ಮೂವರು ಕೊಲೆ ಆರೋಪಿಗಳನ್ನೂ ಬಂಧಿಸಲಾಗಿದೆ ಬಂಧಿತ ಆರೋಪಿಗಳನ್ನು ಹಾವೇರಿ ಜಿಲ್ಲೆಯ ಹಾನಗಲ್‍ನ ಗೆಜ್ಜೆಹಳ್ಳಿಯ ಕಿರಣ್ ಸುರಳೇಶ್ವರ (23), ನಿರಂಜನ ಗೋವಿಂದಪ್ಪ ತಳವಾರ (19) ಹಾಗೂ ಗುಡ್ಡಪ್ಪ ಕೊಟಪ್ಪ ತಿಳುವಳ್ಳಿ (19) ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಹಣಕ್ಕಾಗಿ ಹೊಸಗೆಜ್ಜೆಹಳ್ಳಿಯ ಅಶೋಕ ಗಿರಿಯಪ್ಪ ಉಪ್ಪಾರ (೪೮) ಎಂಬವರನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಅದೇ ಗ್ರಾಮದ ಅಶೋಕ್ ಉಪ್ಪಾರ್ (55) ಎಂಬಾತನನ್ನು ಮೂರು ದಿನಗಳ ಹಿಂದೆ ಕೊಲೆ ಮಾಡಿದ್ದರು. ಬಳಿಕ ಗುರುತು ಸಿಗದಂತೆ ಶವವನ್ನು ಗೋಣಿ ಚೀಲದಲ್ಲಿ ತುಂಬಿಕೊಂಡು ತಂದು ತಾಲೂಕಿನ ಕೊರ್ಲಕಟ್ಟಾ – ವಡ್ಡಿನಕೊಪ್ಪ ರಸ್ತೆಯ ಅರಣ್ಯ ಪ್ರದೇಶದಲ್ಲಿ ಎಸೆದು ಹೋಗಿದ್ದರು. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಕ್ರೇಟಾ ಕಾರು, ಸ್ವಿಫ್ಟ್‌ ಕಾರು ಹಾಗೂ ಬೈಕ್ ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಹಾಗೂ ಹಣಕ್ಕಾಗಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಶಿರಸಿ ಉಪವಿಭಾಗದ ಡಿ.ಎಸ್.ಪಿ ಗಣೇಶ ಕೆ.ಎಲ್ ಮಾರ್ಗದರ್ಶನದಲ್ಲಿ ಶಿರಸಿ ವೃತ್ತದ ಸಿ.ಪಿ.ಐ ರಾಮಚಂದ್ರ ನಾಯಕ, ಬನವಾಸಿ ಠಾಣೆಯ ಪಿಎಸ್‌ಐ ಚಂದ್ರಕಲಾ ಪತ್ತಾರ್, ತನಿಖಾ ಸುನಿಲಕುಮಾರ್ ಬಿವೈ, ಶಿರಸಿ ನಗರ ಠಾಣೆಯ ತನಿಖಾ ಪಿ.ಎಸ್.ಐ ಮಹಾಂತೇಶ ಕಂಬಾರ್, ಸಿಬ್ಬಂದಿಗಳಾದ ಚಂದ್ರಪ್ಪ ಕೊರವರ್, ಅನ್ಸಾರಿ, ಬಸವರಾಜ್ ಜಾಡರ್, ಜಗದೀಶ್ ಕೆ, ಬಸವರಾಜ್ ಮಾಗೇರಿ, ರಾಜು ಸಲಗಾವಿ, ಸಹದೇವ್, ಮಹಾಂತೇಶ್ ರಾಮಯ್ಯ, ನಾಗಪ್ಪ ಲಮಾಣಿ, ಸದ್ದಾಮ್ ಹುಸೇನ್, ಮುಕ್ತಿಯಾರ್, ಮಲ್ಲೇಶ್, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement