ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ : ಸೆಪ್ಟೆಂಬರ್ 19 ‘ಐತಿಹಾಸಿಕ ದಿನ’ ಎಂದ ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಯನ್ನು ಇಂದು, ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಸೆಪ್ಟೆಂಬರ್ 19 ಅನ್ನು “ಐತಿಹಾಸಿಕ ದಿನ” ಎಂದು ಕರೆದ ಪ್ರಧಾನಿ ನರೇಂದ್ರ ಮೋದಿ, ಸುಮಾರು ಮೂರು ದಶಕಗಳಿಂದ ಅಂಟಿಕೊಂಡಿರುವ ‘ನಾರಿ ಶಕ್ತಿ ವಂದನ್ ಅಧಿನಿಯಮ್’ – ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸುವಂತೆ ಪ್ರತಿಪಕ್ಷಗಳಿಗೆ ಮನವಿ ಮಾಡಿದರು.
ಹೊಸ ಸಂಸತ್ ಕಟ್ಟಡದಲ್ಲಿ ಈ ಐತಿಹಾಸಿಕ ಸಂದರ್ಭದಲ್ಲಿ, ಸದನದ ಮೊದಲ ಕಲಾಪವಾಗಿ, ಎಲ್ಲಾ ಸಂಸದರು ಮಹಿಳಾ ಶಕ್ತಿಗಾಗಿ ಹೆಬ್ಬಾಗಿಲು ತೆರೆಯುವ ಪ್ರಾರಂಭವನ್ನು ಈ ನಿರ್ಣಾಯಕ ನಿರ್ಧಾರದಿಂದ ಮಾಡಲಾಗುತ್ತಿದೆ” ಎಂದು ಪ್ರಧಾನಿ ಮೋದಿ ಲೋಕಸಭೆಯಲ್ಲಿ ಹೇಳಿದರು.
ತಮ್ಮ ಸರ್ಕಾರವು “ಮಹಿಳೆಯರ ನೇತೃತ್ವದ ಅಭಿವೃದ್ಧಿಯ ನಮ್ಮ ಸಂಕಲ್ಪವನ್ನು” ಮುಂದಕ್ಕೆ ತೆಗೆದುಕೊಂಡು “ಪ್ರಮುಖ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತರುತ್ತಿದೆ” ಎಂದು ಪ್ರಧಾನಿ ಮೋದಿ ಘೋಷಿಸಿದರು. ನಾರಿ ಶಕ್ತಿ ವಂದನ್ ಅಧಿನಿಯಮ್‌’ ನಮ್ಮ ಪ್ರಜಾಪ್ರಭುತ್ವವನ್ನು ಮತ್ತಷ್ಟು ಸಶಕ್ತಗೊಳಿಸುತ್ತದೆ. ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸುವಂತೆ ಅವರು ಲೋಕಸಭೆಗೆ ಒತ್ತಾಯಿಸಿದರು.
ಈ ಮಸೂದೆಯನ್ನು ಕಾನೂನಾಗಿ ಮಾಡಲು ನಾವು ಬದ್ಧರಾಗಿದ್ದೇವೆ ಎಂದು ನಾನು ಎಲ್ಲಾ ಮಹಿಳೆಯರಿಗೆ ಭರವಸೆ ನೀಡುತ್ತೇನೆ. ಈ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಲು ನಾನು ಉಭಯ ಸದನಗಳ ಎಲ್ಲಾ ಸದಸ್ಯರನ್ನು ಕೋರುತ್ತೇನೆ” ಎಂದು ಪ್ರಧಾನಿ ಹೇಳಿದರು.

ಈ ತಿದ್ದುಪಡಿಯೊಂದಿಗೆ ಲೋಕಸಭೆಯಲ್ಲಿ ಮಹಿಳಾ ಸಂಸದರ ಸಂಖ್ಯೆ 82 ರಿಂದ 181 ಕ್ಕೆ ಏರಲಿದೆ ಎಂದು ಹೇಳಿದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಮಸೂದೆಯನ್ನು ಮಂಡಿಸಿದರು.
ಏತನ್ಮಧ್ಯೆ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಹಿಳಾ ಕೋಟಾ ಮಸೂದೆಗೆ ತಮ್ಮ ಪಕ್ಷ ಮನ್ನಣೆ ನೀಡಿದೆ. ರಾಜೀವ್ ಗಾಂಧಿ, ಪಿವಿ ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ಅವರ ಹಿಂದಿನ ಕಾಂಗ್ರೆಸ್ ಸರ್ಕಾರಗಳು ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಅಂಗೀಕರಿಸಲು ಸತತವಾಗಿ ಪ್ರಯತ್ನಿಸಿದ್ದವು ಎಂದು ಅವರು ಹೇಳಿದರು.
ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯಸಭೆಯಲ್ಲಿ ಅಂಗೀಕರಿಸಲ್ಪಟ್ಟ ಮಹಿಳಾ ಮೀಸಲಾತಿ ಮಸೂದೆಯು ಇನ್ನೂ ಬಾಕಿ ಉಳಿದಿದೆ ಎಂದು ಚೌಧರಿ ಹೇಳಿದ್ದಾರೆ.
ಆದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಹೇಳಿಕೆಗೆ ಪ್ರತಿಯಾಗಿ ಬಿಲ್ ಈಗಾಗಲೇ ಲ್ಯಾಪ್ಸ್ ಆಗಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಉತ್ತಮ ಪ್ರತಿಕ್ರಿಯೆ, ಜನರು ದಾಖಲೆ ಸಂಖ್ಯೆಯಲ್ಲಿ ಎನ್‌ಡಿಎಗೆ ಮತ ಹಾಕಿದ್ದಾರೆ : ಲೋಕಸಭೆ ಚುನಾವಣೆ 1ನೇ ಹಂತದ ಮತದಾನದ ಬಗ್ಗೆ ಪ್ರಧಾನಿ ಮೋದಿ

ಮಹಿಳಾ ಮೀಸಲಾತಿ ಮಸೂದೆ – ಮುಖ್ಯಾಂಶಗಳು
ಸಂವಿಧಾನ (128ನೇ ತಿದ್ದುಪಡಿ) ಮಸೂದೆ, 2023, ಸಂವಿಧಾನದಲ್ಲಿ ಮೂರು ಹೊಸ ವಿಧಿಗಳು ಮತ್ತು ಒಂದು ಹೊಸ ಷರತ್ತುಗಳನ್ನು ಪರಿಚಯಿಸಲು ಪ್ರಯತ್ನಿಸುತ್ತದೆ.
1. 239AA ನಲ್ಲಿ ಹೊಸ ಷರತ್ತು: ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಶಾಸಕಾಂಗ ಸಭೆಗೆ ವಿಸ್ತರಿಸುತ್ತದೆ. ದೆಹಲಿ ವಿಧಾನಸಭೆಯಲ್ಲಿ ಮಹಿಳೆಯರಿಗೆ ಸೀಟುಗಳನ್ನು ಮೀಸಲಿಡಬೇಕು, ಪರಿಶಿಷ್ಟರಿಗೆ ಮೀಸಲಾದ ಸ್ಥಾನಗಳಲ್ಲಿ 1/3 ನೇ ಸ್ಥಾನವನ್ನು ಮಹಿಳೆಯರಿಗೆ ಮೀಸಲಿಡಬೇಕು, ನೇರ ಚುನಾವಣೆಗಳಿಂದ ಭರ್ತಿ ಮಾಡಬೇಕಾದ ಒಟ್ಟು ಸ್ಥಾನಗಳ 1/3 ಮೀಸಲಿಡಬೇಕು.
2. ಹೊಸ ವಿಧಿ – 330A: ಲೋಕಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ -ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಮೀಸಲಾದ ಸ್ಥಾನಗಳಲ್ಲಿ 1/3 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಬೇಕು, ಲೋಕಸಭೆಗೆ ನೇರ ಚುನಾವಣೆಯಿಂದ ತುಂಬುವ ಒಟ್ಟು ಸ್ಥಾನಗಳ 1/3 ಭಾಗವನ್ನು ಮಹಿಳಯರಿಗೆ ಮೀಸಲಿಡಬೇಕುರು
3. ಹೊಸ ವಿಧಿ – 332A: ಪ್ರತಿ ರಾಜ್ಯ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾದ ಸ್ಥಾನಗಳಲ್ಲಿ ಪರಿಶಿಷ್ಟ ಜಾತಿ/ ಪಂಗಡಗಳಿಗೆ ಮೀಸಲಾದ ಸ್ಥಾನಗಳಲ್ಲಿ 1/3 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಬೇಕು, ನೇರ ಚುನಾವಣೆಯಿಂದ ಆಯ್ಕೆಯಾಗುವ ಒಟ್ಟು ಸ್ಥಾನಗಳ 1/3 ಭಾಗವನ್ನು ಮಹಿಳೆಯರಿಗೆ ಮೀಸಲಿಡಬೇಕು.
4. ಹೊಸ ವಿಧಿ – 334A: ಮೊದಲ ಜನಗಣತಿಗೆ ಸಂಬಂಧಿಸಿದ ಅಂಕಿಅಂಶಗಳನ್ನು ಪ್ರಕಟಿಸಿದ ನಂತರ ಡಿಲಿಮಿಟೇಶನ್ ಅನ್ನು ಕೈಗೊಂಡ ನಂತರ ಮೀಸಲಾತಿ ಜಾರಿಗೆ ಬರುತ್ತದೆ. ಮಹಿಳೆಯರಿಗೆ ಸ್ಥಾನಗಳ ರೊಟೇಶನ್‌ ಪ್ರತಿ ನಂತರದ ಡಿಲಿಮಿಟೇಶನ್ ಪ್ರಕ್ರಿಯೆ ನಂತರ ಜಾರಿಗೆ ಬರುತ್ತದೆ

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ 35 ವರ್ಷಗಳಿಂದ ಪಕ್ಷದಲ್ಲಿದ್ದ ಪ್ರಿಯಾಂಕಾ ಗಾಂಧಿ ಆಪ್ತ ತಜೀಂದರ್ ಸಿಂಗ್ ಬಿಟ್ಟು...!

ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಒದಗಿಸುವ ಮಸೂದೆಯನ್ನು ಮೊದಲು ಲೋಕಸಭೆಯಲ್ಲಿ 1996 ರಲ್ಲಿ ದೇವೇಗೌಡ ನೇತೃತ್ವದ ಯುನೈಟೆಡ್ ಫ್ರಂಟ್ ಸರ್ಕಾರ ಮಂಡಿಸಿತು. ಇದು ಸದನದ ಅನುಮೋದನೆಯನ್ನು ಪಡೆಯುವಲ್ಲಿ ವಿಫಲವಾಯಿತು ಮತ್ತು ಡಿಸೆಂಬರ್ 1996 ರಲ್ಲಿ ಲೋಕಸಭೆಗೆ ತನ್ನ ವರದಿಯನ್ನು ಸಲ್ಲಿಸಿದ ಜಂಟಿ ಸಂಸದೀಯ ಸಮಿತಿಗೆ ಉಲ್ಲೇಖಿಸಲಾಯಿತು. ಆದರೆ ಲೋಕಸಭೆಯ ವಿಸರ್ಜನೆಯೊಂದಿಗೆ ಮಸೂದೆಯು ನಿಷ್ಕ್ರಿಯವಾಯಿತು.
1998 ರಲ್ಲಿ, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ ಡಿಎ ಸರ್ಕಾರವು ಲೋಕಸಭೆಯಲ್ಲಿ ಮಸೂದೆಯನ್ನು ಪುನಃ ಮಂಡಿಸಿತು. ಈ ಮಸೂದೆಯು ಸಹ ಬೆಂಬಲವನ್ನು ಪಡೆಯುವಲ್ಲಿ ವಿಫಲವಾಯಿತು ಮತ್ತು ಮತ್ತೆ ಲ್ಯಾಪ್ಸ್ ಆಯಿತು. ಈ ಮಸೂದೆಯನ್ನು 1999, 2002 ಮತ್ತು 2003 ರಲ್ಲಿ ಪುನಃ ಮಂಡಿಸಲಾಯಿತು. ಕಾಂಗ್ರೆಸ್, ಬಿಜೆಪಿ ಮತ್ತು ಎಡಪಕ್ಷಗಳಲ್ಲಿ ಇದಕ್ಕೆ ಬೆಂಬಲವಿದ್ದರೂ ಸಹ, ಮಸೂದೆಯು ಬಹುಮತವನ್ನು ಪಡೆಯುವಲ್ಲಿ ವಿಫಲವಾಯಿತು.
2008 ರಲ್ಲಿ, ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಿತು ಮತ್ತು ಅದನ್ನು 2010 ರಲ್ಲಿ ಅಂಗೀಕರಿಸಲಾಯಿತು. ಆದಾಗ್ಯೂ, ಮಸೂದೆಯನ್ನು ಲೋಕಸಭೆಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಲೇ ಇಲ್ಲ ಮತ್ತು 2014ರಲ್ಲಿ 15 ನೇ ಲೋಕಸಭೆಯ ವಿಸರ್ಜನೆಯೊಂದಿಗೆ ಲಾಪ್ಸ್ ಆಯಿತು.

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement