ಬೆಂಗಳೂರು : ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್ನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಚಲಿಸುತ್ತಿದ್ದ ರೈಲಿನಲ್ಲಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಬಂಧನವಾಗಿದ್ದು, ಬೋಧಗಯಾಗೆ ತೆರಳುತ್ತಿದ್ದ ವೇಳೆ ಒಡಿಶಾ ಪೊಲೀಸರ ಸಹಾಯದಿಂದ ಬಂಧಿಸಲಾಗಿದೆ ಎನ್ನಲಾಗಿದೆ. ಅವರನ್ನು ಇಂದು, ಮಂಗಳವಾರ ರಾತ್ರಿ ಕಟಕ್ನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ಹೇಳಲಾಗಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ