ವಂಚನೆ ಪ್ರಕರಣ : ಮತ್ತೋರ್ವ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

ಬೆಂಗಳೂರು : ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್​ನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಚಲಿಸುತ್ತಿದ್ದ ರೈಲಿನಲ್ಲಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ  ಬಂಧನವಾಗಿದ್ದು, ಬೋಧಗಯಾಗೆ ತೆರಳುತ್ತಿದ್ದ ವೇಳೆ ಒಡಿಶಾ ಪೊಲೀಸರ ಸಹಾಯದಿಂದ ಬಂಧಿಸಲಾಗಿದೆ ಎನ್ನಲಾಗಿದೆ. ಅವರನ್ನು ಇಂದು, ಮಂಗಳವಾರ ರಾತ್ರಿ ಕಟಕ್​ನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ಹೇಳಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement