ಕಾವೇರಿ ವಿವಾದ : ನದಿಯಲ್ಲಿ ನೀರಿಲ್ಲ ಎಂದು ಸುಪ್ರೀಂ ಕೋರ್ಟಿಗೆ ಇಂದು ಅರ್ಜಿ ; ಸಿಎಂ ಸಿದ್ದರಾಮಯ್ಯ

ನವದೆಹಲಿ : ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ‘ನದಿಯಲ್ಲಿ ನೀರು ಇಲ್ಲ’ ಎಂದು ಗುರುವಾರ (ಸೆಪ್ಟೆಂಬರ್‌ 21) ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದೆಹಲಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಸಭೆಯ ಬಳಿಕ ಮಾತನಾಡಿದ ಅವರು, “ ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಕೇಂದ್ರ ಸಚಿವರು ಭಾಗಿಯಾಗಿದ್ದರು. ಬೇರೆ ಕೆಲಸವಿದ್ದ ಹಿನ್ನೆಲೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಸಭೆಗೆ ಬಂದಿರಲಿಲ್ಲ” ಎಂದು ತಿಳಿಸಿದರು.
ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಅಣೆಕಟ್ಟು​ಗಳಲ್ಲಿ ನೀರಿಲ್ಲ. 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. 123 ವರ್ಷಗಳಲ್ಲಿ ಎಂದೂ ಇಷ್ಟೊಂದು ಮಳೆ ಕೊರತೆಯಾಗಿರಲಿಲ್ಲ. ರಾಜ್ಯದ ಕಾವೇರಿ ನದಿ ನೀರು ವಿಚಾರದಲ್ಲಿ ಸಂಕಷ್ಟ ಸೂತ್ರ ಅಗತ್ಯ. ಸಂಕಷ್ಟದ ಪರಿಸ್ಥಿತಿಯಲ್ಲಿ ಎಷ್ಟು ನೀರು ಬಿಡಬೇಕೆಂದು ತಿಳಿಸಿಲ್ಲ. ಸಂಕಷ್ಟದ ಸೂತ್ರ ಇನ್ನೂ ಸಿದ್ಧವಾಗಿಲ್ಲ” ಎಂದು ತಿಳಿಸಿದರು.
ಮಳೆ ಸಾಮಾನ್ಯವಾಗಿದ್ದರೆ 108 ಟಿಎಂಸಿ ನಾವು ಕೊಡಬೇಕಿತ್ತು. ಆದರೆ ಮಳೆ ಕೊರತೆಯಿಂದ ನಾವು ಸಹ ಸಂಕಷ್ಟದಲ್ಲಿದ್ದೇವೆ. ಕೇಂದ್ರ ಜಲಸಂಪನ್ಮೂಲ ಸಚಿವರ ಭೇಟಿಗೆ ಸಮಯ ಕೇಳಲಾಗಿದೆ. ನಾಳೆ ಸುಪ್ರೀಂಕೋರ್ಟ್​ಗೆ ನೀರು ಇಲ್ಲವೆಂದು ಅರ್ಜಿ ಹಾಕುತ್ತೇವೆ, ಎರಡೂ ರಾಜ್ಯಗಳ ನಾಯಕರನ್ನು ಪ್ರಧಾನಿ ಕರೆದು ಮಾತನಾಡಬೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪ್ರಮುಖ ಸುದ್ದಿ :-   ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement