ನಟ ಪ್ರಕಾಶ ರಾಜಗೆ ಜೀವ ಬೆದರಿಕೆ; ಯೂಟ್ಯೂಬ್ ಚಾನಲ್ ವಿರುದ್ಧ ದೂರು ದಾಖಲು

ಬೆಂಗಳೂರು : ತಮ್ಮ ಮತ್ತು ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಹಾಕಲಾಗಿದೆ ಎಂದು ನಟ ಪ್ರಕಾಶ ರಾಜ ಅವರು ಬೆಂಗಳೂರಿನಲ್ಲಿ ಯೂಟ್ಯೂಬ್ ವಾಹಿನಿ ವಿರುದ್ಧ ದೂರು ದಾಖಲಿಸಿದ್ದಾರೆ.
ಯೂಟ್ಯೂಬ್​ ಚಾನೆಲ್’ವೊಂದರಲ್ಲಿ ಎರಡು ವೀಡಿಯೊಗಳಲ್ಲಿ ಜೀವ ಬೆದರಿಕೆ ಹಾಕುವ ರೀತಿಯಲ್ಲಿ ಸಂದೇಶಗಳು ಪ್ರಸಾರವಾಗಿವೆ ಎಂದು ಪ್ರಕಾಶ ರಾಜ ಅವರು ದೂರನಲ್ಲಿ ಆರೋಪಿಸಿದ್ದಾರೆ.
ಕೆಲ ದಿನಗಳ ಹಿಂದೆ ಯೂಟ್ಯೂಬ್ ವಾಹಿನಿಯಲ್ಲಿ ಜೀವ ಬೆದರಿಕೆ ಹಾಕುವ ಸಂದೇಶಗಳ ರೀತಿ ಸುದ್ದಿ ಪ್ರಸಾರ ಮಾಡಲಾಗಿದೆ ಎಂದು ವಿರುದ್ಧ ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಯೂಟ್ಯೂಬ್ ವಾಹಿನಿ ವಿರುದ್ಧ ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 506, 504, 505ರ ಅಡಿ ಮೊಕದ್ದಮೆ ದಾಖಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಶಿರಸಿ: ಕಚೇರಿಗೆ ತೆರಳಿ ಬಿಜೆಪಿ ಸಂಸದ ಕಾಗೇರಿ ಅಭಿನಂದಿಸಿದ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ...!

ನಿಮ್ಮ ಕಾಮೆಂಟ್ ಬರೆಯಿರಿ

advertisement