ವಂಚನೆ ಪ್ರಕರಣ: ಅಭಿನವ ಹಾಲಶ್ರೀ ಸ್ವಾಮೀಜಿ 10 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಗೋವಿಂದ ಪೂಜಾರಿ ಎಂಬ ಉದ್ಯಮಿಗೆ ಸುಮಾರು 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಸೆಪ್ಟೆಂಬರ್‌ 29ರವರೆಗೆ 10 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ಇತ್ತೀಚೆಗೆ ಪ್ರಕರಣ ಹೊರಬಂದಾಗಿನಿಂದ ತಲೆಮರೆಸಿಕೊಂಡಿದ್ದ ಸ್ವಾಮೀಜಿ, ಮಠದಿಂದ ತಲೆಮರೆಸಿಕೊಂಡಿದ್ದರು. ವೇಷ ಬದಲಿಸಿಕೊಂಡು, ರಾಜ್ಯವನ್ನೇ ತೊರೆದು ಹೊರ ರಾಜ್ಯಗಳಲ್ಲಿ ಓಡಾಡುತ್ತಿದ್ದ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲವೀರಪ್ಪ ಸ್ವಾಮೀಜಿಯನ್ನು ಅಲ್ಲಿನ ಸ್ಥಳೀಯ ಪೊಲೀಸರ ನೆರವಿನಿಂದ ನಿನ್ನೆ ಒಡಿಸ್ಸಾದ ಕಟಕ್‌ ನಲ್ಲಿ ಬಂಧಿಸಿದ್ದ ಸಿಸಿಬಿ ಪೊಲೀಸರು ಕೆಂಪೇಗೌಡ ಏರ್ ಪೋರ್ಟ್ ಮೂಲಕ ಬೆಂಗಳೂರಿಗೆ ಕರೆತಂದಿದ್ದರು.
ಬುಧವಾರ (ಸೆ.20) ಬೆಳಿಗ್ಗೆ 19ನೇ ಎಸಿಎಂಎಂ ನ್ಯಾಯಾಲಯದ ಮಂದೆ ಹಾಜರುಪಡಿಸಿದ ಸಿಸಿಬಿ ಪೊಲೀಸರು, ಸ್ವಾಮೀಜಿಯವರ ಹೆಚ್ಚಿನ ವಿಚಾರಣೆ ನಡೆಸಬೇಕಿರುವುದರಿಂದ ಅವರನ್ನು ತಮ್ಮ ವಶಕ್ಕೆ ಒಪ್ಪಿಸಬೇಕೆಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಅವರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಸೆ. 29ರವರೆಗೆ (10 ದಿನ) ಸ್ವಾಮೀಜಿಯನ್ನು ಸಿಸಿಬಿ ಪೊಲೀಸರ ವಶಕ್ಕೆ ಕೊಟ್ಟಿದೆ.

ಪ್ರಮುಖ ಸುದ್ದಿ :-   ವಂಚನೆ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿನಿಂದ ಚೈತ್ರಾ ಬಿಡುಗಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement