ಮೂರು ಡಿಸಿಎಂ ಹುದ್ದೆಯ ನನ್ನ ಅಭಿಪ್ರಾಯಕ್ಕೆ ನಾನು ಈಗಲೂ ಬದ್ಧ : ಸಚಿವ ಕೆ.ಎನ್ ರಾಜಣ್ಣ

ಬೆಂಗಳೂರು : ಪಕ್ಷದ ಹಿತದೃಷ್ಠಿಯಿಂದ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಹೇಳಿದ್ದೇನೆ. ಈ ಅಭಿಪ್ರಾಯಕ್ಕೆ‌ ನಾನು ಈಗಲೂ ಬದ್ಧನಾಗಿದ್ದೇನೆ. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಮುದಾಯವಾರು ಮೂರು ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಹಾಗೂ ಇದರಲ್ಲಿ ತಪ್ಪೇನಿದೆ? ಪಕ್ಷಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಮಾತು ಹೇಳಿದ್ದೇನೆ. ಈ ನಿಟ್ಟಿನಲ್ಲಿ ಯಾವುದೇ ಸವಾಲು ಬಂದರೂ ಎದುರಿಸಲು ಸಿದ್ಧ ಎಂದು ತಿಳಿಸಿದರು.
ಮೂರು ಉಪಮುಖ್ಯಮಂತ್ರಿಗಳ ಸೃಷ್ಟಿ ಮಾಡುವ ವಿಚಾರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನಿಂದ ಹೇಳಿಸುತ್ತಿದ್ದಾರೆ ಎಂದು ಹೇಳುವುದು ಸರಿಯಲ್ಲ. ಇದು ನನ್ನ ಅಭಿಪ್ರಾಯವಾಗಿದೆ. ನಾನು ಈ ವಿಚಾರವಾಗಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಲ್ಲ. ಹೆಚ್ಚು ಡಿಸಿಎಂ ಹುದ್ದೆ ಸೃಷ್ಟಿ ಮಾಡಿದರೆ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದ್ದೇನೆ. ಇದರಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಪ್ರಾಮುಖ್ಯತೆ ಕಡಿಮೆ ಮಾಡಲಾಗುತ್ತದೆ ಎಂದು ಗ್ರಹಿಸುವುದು ಸರಿಯಲ್ಲ. ಪಕ್ಷದ ಹಿತದೃಷ್ಟಿಯಿಂದ ಹೇಳಿದ್ದೇನೆ. ಹೈಕಮಾಂಡ್‌ಗೆ ಸರಿ ಅನ್ನಿಸಿದರೆ ಮಾಡುತ್ತಾರೆ. ಬೇಡ ಅಂದರೆ ಬಿಡುತ್ತಾರೆ ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು: ಮದುವೆ ಮನೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಪಾನ್‌ ತಿಂದ ಬಾಲಕಿಯ ಹೊಟ್ಟೆಯಲ್ಲಿ ರಂಧ್ರ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement