ಕರ್ನಾಟಕದ ಹಲವೆಡೆ ಐದಾರು ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳ ಕಾಲ ಕರಾವಳಿಯ ಬಹುತೇಕ ಭಾಗಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಬೀಳುವ ಮುನ್ಸೂಚನೆ ಇದೆ. . ಮತ್ತೊಂದೆಡೆ ಬೆಂಗಳೂರಿನಲ್ಲಿ ಒಂದೆರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. . ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು‌ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement