ಕಾವೇರಿ : ರೈತರ ಪ್ರತಿಭಟನೆಗೆ ನಿರ್ಮಲಾನಂದನಾಥ ಸ್ವಾಮೀಜಿ ಸಾಥ್

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ ನಂತರ ರಾಜ್ಯದಲ್ಲಿ ಪ್ರತಿಭಟನೆ ಜೋರಾಗಿದೆ. ಹಲವು ಕಡೆ ರೈತರು, ವಿವಿಧ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಡ್ಯದಲ್ಲಿ ಪ್ರತಿಭಟನೆ ಜೋರಾಗಿದ್ದು, ಈ ಪ್ರತಿಭಟನೆಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಬೆಂಬಲ ಸೂಚಿಸಿದ್ದಾರೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸುತ್ತಿದ್ದು ನಿರ್ಮಲಾನಂದನಾಥ ಶ್ರೀಗಳು ಹೋರಾಟದಲ್ಲಿ ಪಾಲ್ಗೊಂಡು ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಪ್ರತಿವರ್ಷ 419 ಟಿಎಂಸಿ ಬಿಡಬೇಕಿದೆ ಹಾಗೂ ರಾಜ್ಯಕ್ಕೆ 270 ಟಿಎಂಸಿ ನೀರಿನ ಅವಶ್ಯಕತೆ ಇದೆ. ಆದರೆ ಮಳೆ ಕಡಿಮೆಯಾದಾಗ ಸಂಕಷ್ಟ ಸೂತ್ರ ರಚಿಸಬೇಕಿತ್ತು. ಈ ಭಾಗದಲ್ಲೇ ಕುಡಿಯುವ ನೀರಿನ ಸಮಸ್ಯೆ ಇದೆ. ಜಲಾಶಯದಲ್ಲಿ ನೀರಿನ ಸಂಗ್ರಹವೂ ಕಡಿಮೆ ಇದೆ ಎಂದು ಹೇಳಿದ್ದಾರೆ.

ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ. ಈಗ ಮತ್ತೆ 5 ಸಾವಿರ ಕ್ಯೂಸೆಕ್ 15 ದಿನ ಹರಿಸಲು ಸೂಚನೆ ನೀಡಿದ್ದಾರೆ. ಈ ಆದೇಶದಂತೆ ನೀರು ಹರಿದರೆ ಡ್ಯಾಂನಲ್ಲಿ ನೀರು ಉಳಿಯುವುದಿಲ್ಲ. ಕಷ್ಟ ಮತ್ತಷ್ಟು ಉಲ್ಬಣವಾಗಬಾರದೆಂದು ಹೋರಾಟ ಮಾಡಲಾಗುತ್ತಿದೆ. ಮುಂದೆ ಕುಡಿಯುವ ನೀರಿಗೂ ತೊಂದರೆಯಾಗಲಿದೆ. ಹೀಗಾಗಿ ಸುಪ್ರೀಂಕೋರ್ಟ್ ಆದೇಶವನ್ನ ಸರ್ಕಾರ ಪ್ರಶ್ನೆ ಮಾಡಬೇಕು. ಸುಪ್ರೀಂಕೋರ್ಟ್ ನಲ್ಲಿ ಸರ್ಕಾರ ಕಾನೂನು ಹೋರಾಟ ಮುಂದುವರೆಸಬೇಕು. ನಮ್ಮ ರೈತರ ಹಿತ ಕಾಯಬೇಕು ಎಂದು ಹೇಳಿದ್ದಾರೆ.
ಈಗಿನ ಆದೇಶ ಪಾಲನೆ ಮಾಡಿದರೆ ರೈತರ ಬದುಕು ಬೀದಿಗೆ ಬರಲಿದೆ. ಸದ್ಯ ಸಂಕಷ್ಟದ ಪರಿಸ್ಥಿತಿ ಇದೆ. ರೈತರ ಪರವಾಗಿ ಶ್ರೀ ಮಠ ಯಾವಾಗಲೂ ಇರುತ್ತದೆ ಎಂದು ಭರವಸೆ ನೀಡಿದರು.

ಪ್ರಮುಖ ಸುದ್ದಿ :-   ವೀಡಿಯೊ : ಯಡವಟ್ಟಿನಿಂದ ಚಾಲಕನೇ ಇಲ್ಲದೆ ಗಂಟೆಗೆ 100 ಕಿಮೀ ವೇಗದಲ್ಲಿ 70 ಕಿಮೀ ದೂರ ಓಡಿದ ರೈಲು..: ಆಗಿದ್ದೇನೆಂದರೆ..| ವೀಕ್ಷಿಸಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement