ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟ ಪುತ್ರನ ಹೇಳಿಕೆ : ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಕರ್ನಾಟಕದ ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಮುಖ್ಯಮಂತ್ರಿ ಆಗಿದ್ದಾರೆ ಎಂದು  ಆರೋಪಿಸಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಒಬ್ಬ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿರುವ ಕ್ಷೇತ್ರದಲ್ಲೇ ಈ ರೀತಿ ಚುನಾವಣಾ ಅಕ್ರಮ ನಡೆದಿರುವುದು ಆಘಾತಕಾರಿ. ಕುಕ್ಕರ್‌, ಐರನ್‌ ಬಾಕ್ಸ್‌ ಆಮಿಷವೊಡ್ಡಿ ಮತದಾರರನ್ನು ಸೆಳೆದಿದ್ದು, ಅನ್ಯ ಮಾರ್ಗದಲ್ಲಿ ಚುನಾವಣೆ ಗೆದ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ತನಿಖೆ ನಡೆಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಜಾಪತಿನಿಧಿ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಯವರನ್ನು ತಕ್ಷಣವೇ ಶಾಸಕ ಸ್ಥಾನದಿಂದ ವಜಾಗೊಳಿಬೇಕು ಎಂದು ಪಕ್ಷವು ದೂರಿನಲ್ಲಿ ಒತ್ತಾಯಿಸಿದೆ.

ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆಯಿಂದ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. 2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕುಕ್ಕರ್, ಇಸ್ತ್ರಿಪೆಟ್ಟಿಗೆ ಹಂಚಿದ್ದರಿಂದ ಸಿದ್ದರಾಮಯ್ಯ ಗೆಲುವು ಸಾಧಿಸಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಭಾರೀ ವೈರಲ್ ಆಗುತ್ತಿದ್ದು, ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಅಸ್ತ್ರವನ್ನಾಗಿಸಿಕೊಂಡ ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಯತೀಂದ್ರ ಏನು ಹೇಳಿದ್ದರು?:
ನಂಜನಗೂಡಿನಲ್ಲಿ ತಾಲೂಕು ಮಡಿವಾಳರ ಸಮುದಾಯ ಭವನದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, 2023 ರ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಬೇಕೆಂದು, ಸಾವಿರಾರು ಜನರನ್ನು ಸೇರಿಸಿ ಅವರೆಲ್ಲರಿಗೂ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ನಂಜಪ್ಪ ಅವರು ನನ್ನ ತಂದೆ ಸಿದ್ದರಾಮಯ್ಯ ಅವರ ಕೈಯಿಂದಲೇ ಅವುಗಳನ್ನು ಕೊಡಿಸಿದ್ದರು ಎಂದು ಹೇಳಿದ್ದಾರೆನ್ನಲಾದ ವೀಡಿಯೊ ವೈರಲ್‌ ಆಗಿತ್ತು. ಮತದಾರರಿಗೆ ಕುಕ್ಕರ್, ಐರನ್ ವಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಎಂದು ಯತಿಂದ್ರ ಅವರು ಹೇಳಿಕೆ ನೀಡಿದ್ದರು. ಆದರೆ ನಂತರ ಅದಕ್ಕೆ ಸ್ಪಷ್ಟನೆ ನೀಡಿದ್ದರು.

4.7 / 5. 3

ನಿಮ್ಮ ಕಾಮೆಂಟ್ ಬರೆಯಿರಿ

advertisement