ಕಾವೇರಿ ಹೋರಾಟ: ಇಂದು ಮಂಡ್ಯ, ಮದ್ದೂರು ಬಂದ್

ಮಂಡ್ಯ : ದಿನದಿಂದ ದಿನ ಕಾವೇರಿ ಹೋರಾಟದ ತೀವ್ರತೆ ಹೆಚ್ಚಾಗುತ್ತಿದ್ದು, ಇಂದು, ಶನಿವಾರ ಮಂಡ್ಯ ಹಾಗೂ ಮದ್ದೂರ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.
ತಮಿಳುನಾಡಿಗೆ ನೀರು ಬಿಡುವಂತೆ ಸೂಚಿಸಿದ ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಇಂದು ರೈತ, ಕನ್ನಡ ಪರ, ಪ್ರಗತಿ ಪರ ಸಂಘಟನೆಗಳು ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಬಂದ್‍ಗೆ ಕರೆ ನೀಡಿವೆ.
ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಎರಡೂ ನಗರಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದ್ದು, ವರ್ತಕರ ಸಂಘ, ಹೋಟೆಲ್, ಪೆಟ್ರೋಲ್ ಬಂಕ್ ಮಾಲೀಕರು, ಆಟೋ ಚಾಲಕರು, ಖಾಸಗಿ ಬಸ್, ಲಾರಿ ಮಾಲೀಕರು ಸಂಘಗಳು ಬೆಂಬಲ ನೀಡಲಾಗಿದೆ. ಹಲವಾರು ಖಾಸಗಿ ಶಿಕ್ಷಣ ಸಂಸ್ಥೆಗಳು ಸಹ ಬಂದ್ ಬೆಂಬಲಿಸಿ ಶಾಲೆಗೆ ರಜೆ ಘೋಷಣೆ ಮಾಡಿವೆ.
ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬಳಿಕ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಮಂಡ್ಯದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಲಿದೆ.
ಜೆ.ಸಿ. ವೃತ್ತದಲ್ಲಿ ರೈತ ಮುಖಂಡರು ರಸ್ತೆಯಲ್ಲೇ ಮಲಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ತಮಿಳುನಾಡಿನ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಹಗರಣ: ಬಿಜೆಪಿ ಮಾಜಿ ಶಾಸಕ ಡಿ.ಎಸ್. ವೀರಯ್ಯ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement