ಕಾವೇರಿ : ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್‌

ಬೆಂಗಳೂರು : ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಖಂಡಿಸಿ ಶನಿವಾರ ಮಂಡ್ಯ ಮತ್ತು ಬೆಂಗಳೂರಿನಲ್ಲಿ ವಿವಿಧ ರೈತ ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆಗಳು ನಡೆಸಿದ್ದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು. ಇದರ ಬೆನ್ನಲ್ಲೇ ಸೆಪ್ಟಂಬರ್ 26 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ.
ಸೆಪ್ಟೆಂಬರ್ 26ರಂದು ಬೆಂಗಳೂರು ನಗರ ಬಂದ್​ ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದೆ ಎಂದು ಫ್ರೀಡಂಪಾರ್ಕ್​ನಲ್ಲಿ ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಪ್ರಕಟಿಸಿದ್ದಾರೆ ಹಾಗೂ ಎಲ್ಲಾ ಸಂಘಟನೆಗಳು ಕೂಡ 26ರಂದು ನಡೆಯುವ ಬೆಂಗಳೂರು ಬಂದ್‌ಗೆ ಬೆಂಬಲ ನೀಡುವಂತೆ ಕೋರಿದ್ದಾರೆ.
ಸೆಪ್ಟಂಬರ್ 26 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಅಂದು ಬೆಳಗ್ಗೆ 11 ಗಂಟೆಗೆ ಟೌನ್ ​ಹಾಲ್​ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ರ್ಯಾಲಿ ಹಮ್ಮಿಕೊಳ್ಳಲಾಗಿದೆ.ಕಾವೇರಿ ವಿವಾದದ ಬಗ್ಗೆ ಚರ್ಚೆ ನಡೆಸಲು ಸರ್ಕಾರವು ವಿಶೇಷ ವಿಧಾನ ಮಂಡಲ ಅಧಿವೇಶನವನ್ನು ಕರೆಯಬೇಕು ಎಂದು ಸಿದ್ದರಾಮಯ್ಯ ಸರ್ಕಾರವನ್ನು ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ. ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

“ಕಾವೇರಿ ನದಿ ನೀರಿನ ಸಮಸ್ಯೆಯನ್ನುಸರಿಯಾಗಿ ನಿರ್ವಹಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ಹಲವಾರು ಸಂಘಟನೆಗಳು ಬೆಂಗಳೂರು ಬಂದ್ ಮಾಡಬೇಕು ಎಂಬ ಆಗ್ರಹವನ್ನು ಮುಂದಿಟ್ಟಿದ್ದವು. ಈ ಹಿನ್ನೆಲೆಯಲ್ಲಿ ಸೆ. 26ರಂದು ಬೆಂಗಳೂರು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದರು.
ಬೆಂಗಳೂರಿನ ಬಂದ್, ಇದು ಬೆಂಗಳೂರಿನ ನಾಗರಿಕರ ಬಂದ್. ಎಲ್ಲ ಶಾಲಾ-ಕಾಲೇಜು, ಕಾರ್ಮಿಕ ಸಂಘಟನೆಗಳು, ಫಿಲ್ಮ್ ಛೇಂಬರ್, ಐಟಿ ಕಂಪನಿಗಳು ಬೆಂಬಲ ಕೊಡಬೇಕು  ಎಂದು ಅವರು ಒತ್ತಾಯಿಸಿದರು.

ಬಿಜೆಪಿ ಬೆಂಬಲ
ವಿವಿಧ ಸಂಘಟನೆಗಳು ಕರೆದಿರುವ ಬೆಂಗಳೂರು ಬಂದ್ ಗೆ ರಾಜ್ಯ ಬಿಜೆಪಿ ಬೆಂಬಲ ವ್ಯಕ್ತಪಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರು ಬಂದ್ ಗೆ ರಾಜ್ಯ ಬಿಜೆಪಿಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ. ಕಾವೇರಿಯ ಪ್ರತಿಯೊಂದು ಪ್ರತಿಭಟನೆಗಳಲ್ಲಿಯೂ ವಿವಿಧ ಸಂಘಟನೆಗಳ ಜೊತೆಗೆ ರಾಜ್ಯದ ಬಿಜೆಪಿ ನಾಯಕರೂ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಬೆಂಗಳೂರು ಬಂದ್ ಗೆ ವಿವಿಧ 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement