ರಾಜ್ಯದ ಈ ಜಿಲ್ಲೆಗಳಲ್ಲಿ 3-4 ದಿನ ಉತ್ತಮ ಮಳೆ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು : ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರದಿಂದ ಮೂರ್ನಾಲ್ಕು ದಿನ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೀದರ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಶನಿವಾರ ಗುಡುಗು ಸಹಿತ ಮಳೆಯಾಗುವ ಸಾದ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಉಳಿದಂತೆ ಕರಾವಳಿ ಹಾಗೂ  ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮೂರ್ನಾಲ್ಕು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement