ಬೆಂಗಳೂರು: ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಮಾಧಾನದ ನೀಡಿದೆ. ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮತ್ತು ಮುಂದಿನ 5 ದಿನಗಳಲ್ಲಿ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ಒಳನಾಡಿನಲ್ಲೂ ಸಾಕಷ್ಟು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಳೆದ ಒಂದು ವಾರ ಕರಾವಳಿಯ ಕೆಲವು ಭಾಗಗಳಲ್ಲಿ ಜೋರಾಗಿ ಮಳೆಯಾಗಿತ್ತು. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಗುರ ಮಳೆಯಾಗಿತ್ತು. ಆದರೆ ಈ ವಾರ ಕರ್ನಾಟಕದಾದ್ಯಂತ ಮಾನ್ಸೂನ್ ಸಕ್ರಿಯವಾಗಿದೆ. ಕಾವೇರಿ ಜಲಾನಯನ ಪ್ರದೇಶ ಹಾಗೂ ಮಲೆನಾಡಿನ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾಗಲಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ, ರಾಜ್ಯದಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ