ವಂಚನೆ ಪ್ರಕರಣ: ಆರೋಪಿ ಚೈತ್ರಾ ಹೆಸರಿನೊಂದಿಗೆ ʼಕುಂದಾಪುರʼ ಬಳಸದಂತೆ ಕೋರ್ಟ್‌ ನಿರ್ಬಂಧ

ಬೆಂಗಳೂರು : ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಐದು ಕೋಟಿ ರೂಪಾಯಿ ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಹಿಂದೂಪರ ಸಂಘಟನೆಯ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಶನಿವಾ ಮಧ್ಯಂತರ ಆದೇಶ ಮಾಡಿದೆ.
ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರು ಉಲ್ಲೇಖಿಸುವುದಕ್ಕೆ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ನ್ಯಾಯಾಲಯಕ್ಕೆ ಕುಂದಾಪುರ ಮೂಲದ ಉದ್ಯಮಿ, ಪ್ರಸ್ತುತ ಬೆಂಗಳೂರು ಹನುಮಂತ ನಗರ ನಿವಾಸಿ ಗಣೇಶ ಶೆಟ್ಟಿ ಎಂಬವರು ಅರ್ಜಿ ಸಲ್ಲಿಸಿದ್ದರು.

ಕುಂದಾಪುರ ದೇವಾಲಯಗಳಿರುವ ಮತ್ತು ಪ್ರಕೃತಿ ಸೊಬಗಿನ ಊರು. ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ
ಚೈತ್ರ ಸಹ ಕುಂದಾಪುರದ ಮೂಲದವರಾಗಿದ್ದಾರೆ. ಆದರೆ, ಈ ವಂಚನೆ ಪ್ರಕರಣಕ್ಕೆ ಮಾಧ್ಯಮಗಳು ಚೈತ್ರಾ ಹೆಸರು ಬಳುಸುವಾಗ ಕುಂದಾಪುರ ಎಂಬುದಾಗಿ ಉಲ್ಲೇಖಿಸುತ್ತಿವೆ. ಇದರಿಂದ ಕುಂದಾಪುರ ಪಟ್ಟಣದ ಹೆಸರು ಮತ್ತು ಘನತೆಗೆ ಧಕ್ಕೆಯಾಗುತ್ತಿದೆ. ಕುಂದಾಪುರ ಎಂದು ಬಳಸುವುದಕ್ಕೆ ಕುಂದಾಪುರ ಹೆಸರು ಉಲ್ಲೇಖಿಸುವುದಕ್ಕೆ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿದ್ದರು.
ಗಣೇಶ ಶೆಟ್ಟಿ ಅವರು ಸಲ್ಲಿಸಿದ್ದ ಮೂಲ ದಾವೆಯ ವಿಚಾರಣೆ ನಡೆಸಿದ ಬೆಂಗಳೂರಿನ 7ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ಬಾಲಗೋಪಾಲ ಕೃಷ್ಣ ಅವರು ಆದೇಶಿಸಿದ್ದಾರೆ.
ಸುದ್ದಿ ವಾಹಿನಿ, ಮಾಧ್ಯಮದಲ್ಲಿ ಕುಂದಾಪುರ ಹೆಸರು ಉಲ್ಲೇಖ ಮತ್ತು ಪ್ಯಾನಲ್‌ ಚರ್ಚೆ ನಡೆಸುವುದಕ್ಕೆ ಮುಂದಿನ ಆದೇಶದವರೆಗೆ ತಾತ್ಕಾಲಿಕ ನಿರ್ಬಂಧ ಆದೇಶ ಮಾಡಲಾಗಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ಉಲ್ಲೇಖಿಸಿದೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement