ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೆಸರು ಬಳಸಿ ವಂಚನೆ; ಇಬ್ಬರ ವಿರುದ್ಧ ದೂರು ದಾಖಲು

ಬೆಂಗಳೂರು: ಅಮೆರಿಕದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆ ಕಾರ್ಯಕ್ರಮಕ್ಕೆ ಇನ್ಫೋಸಿಸ್‌ ಪ್ರತಿಷ್ಠಾನದ  ಸುಧಾ ಮೂರ್ತಿ ಆಗಮಿಸಲಿದ್ದಾರೆ ಎಂದು ಹೇಳಿಕೊಂಡು ಸುಧಾ ಮೂರ್ತಿ ಅವರ ಫೋಟೊ ಬಳಸಿ ವಂಚನೆ ಮಾಡಲಾಗಿದೆ ಎಂದು ಇಬ್ಬರು ಮಹಿಳೆಯರ ವಿರುದ್ಧ ಸುಧಾ ಮೂರ್ತಿ ಅವರ ಆಪ್ತ ಸಹಾಯಕಿ ಮಮತಾ ಸಂಜಯ ಅವರು ದೂರು ದಾಖಲಿಸಿದ್ದಾರೆ.
ಸುಧಾ ಮೂರ್ತಿ ಅವರ ಹೆಸರು, ಫೋಟೊ ಬಳಸಿಕೊಂಡು ವಂಚನೆ ಮಾಡಿದ ಆರೋಪದ ಮೇಲೆ ಶ್ರುತಿ ಹಾಗೂ ಲಾವಣ್ಯ ಎಂಬವರ ವಿರುದ್ಧ ಜಯನಗರ ಪೊಲೀಸ್‌ ಠಾಣೆಯಲ್ಲಿ ಮಮತಾ ಸಂಜಯ ದೂರು ನೀಡಿದ್ದಾರೆ.

ಅಮೆರಿಕದಲ್ಲಿ ಕನ್ನಡ ಕೂಟ ಆಫ್‌ ನಾರ್ಥನ್‌ ಕ್ಯಾಲಿಫೋರ್ನಿಯಾ (KKNC) ವತಿಯಿಂದ ಕಳೆದ ಏಪ್ರಿಲ್‌ನಲ್ಲಿ 50ನೇ ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಸುಧಾ ಮೂರ್ತಿ ಅವರಿಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ ಎಂಬುದಾಗಿ ಇ-ಮೇಲ್‌ ಮೂಲಕ ಆಹ್ವಾನ ನೀಡಲಾಗಿತ್ತು. ಆದರೆ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗುವುದಿಲ್ಲ ಎಂದು ಸುಧಾ ಮೂರ್ತಿ ಅವರು ಇ-ಮೇಲ್‌ ಮೂಲಕ ತಿಳಿಸಿದ್ದರು. ಆದರೆ, ಸುಧಾಮೂರ್ತಿಯವರ ಫೋಟೋಗಳನ್ನು ಬಳಸಿಕೊಂಡು ಜಾಹೀರಾತುಗಳನ್ನು ನೀಡಲಾಗಿತ್ತು. ಇದನ್ನು ಪ್ರಶ್ನಿಸಿದಾಗ ವಂಚನೆ ಬೆಳಕಿಗೆ ಬಂದಿದೆ. ಶ್ರುತಿ ಹಾಗೂ ಲಾವಣ್ಯ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

ಸುಧಾ ಮೂರ್ತಿ ಅವರು ಅಮೆರಿಕಕ್ಕೆ ಆಗಮಿಸಲಿದ್ದಾರೆ. ಮೀಟ್‌ ಆಂಡ್‌ ಗ್ರೀಟ್‌ ವಿತ್‌ ಡಾ.ಸುಧಾ ಮೂರ್ತಿ (Meet And Greet With Dr. Sudha Murty) ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿ ಒಂದು ಟಿಕೆಟ್‌ಗೆ 40 ಡಾಲರ್ (ಸುಮಾರು 3,300 ರೂ.) ಪಡೆದು ವಂಚಿಸಲಾಗಿದೆ. ಸುಧಾ ಮೂರ್ತಿ ಕಚೇರಿ ಹೆಸರಿನಲ್ಲಿ ಅವರ ಫೋಟೊ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಲಾಗಿದೆ. ಹೀಗಾಗಿ, ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸುಧಾ ಮೂರ್ತಿ ಅವರ ಆಪ್ತ ಸಹಾಯಕಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಜಯನಗರ ಠಾಣೆಯಲ್ಲಿ ಐಟಿ ಕಾಯ್ದೆಯ 66 C, 66 D ಸೆಕ್ಷನ್ ಹಾಗೂ ಐಪಿಸಿ 419, 420 ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement