ಕಮಲ-ಜೆಡಿಎಸ್‌ ಮೈತ್ರಿ ಬೆನ್ನಲ್ಲೇ ಯಡಿಯೂರಪ್ಪ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್ ಪಕ್ಷವು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ ಬೆನ್ನಲ್ಲೇ ನಿಖಿಲ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
ನಗರದ ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ ಅವರು, ಯಡಿಯೂರಪ್ಪ ಅವರಿಗೆ ಹೂಗುಚ್ಛ ನೀಡಿ, ಶಾಲು ಹೊದಿಸಿ ಗೌರವಿಸಿದರು. ಆರ್.ಆರ್ ನಗರ ಶಾಸಕ ಮುನಿರತ್ನ ನಿಖಿಲಗೆ ಜೊತೆಗೆ ಆಗಮಿಸಿದ್ದರು.
ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಅವರು, ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಬೆಂಬಲ ನೀಡಿದೆ. ಬಿಜೆಪಿ-ಜೆಡಿಎಸ್ ಜಂಟಿಯಾಗಿ ಲೋಕಸಭೆ ಚುನಾವಣೆ ಎದುರಿಸಲಿದೆ. ದೇವೇಗೌಡರು ರಾಜ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಮಾಡಿದ್ದಾರೆ. ಹಿರಿಯರ ಆಶೀರ್ವಾದ ಪಡೆದುಕೊಳ್ಳುವುದು ನಮ್ಮ ಸಂಸ್ಕೃತಿ. ಹೀಗಾಗಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ 28 ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲಲಿದೆ ಎಂದರು.

ಜೆಡಿಎಸ್ ಪ್ರಾದೇಶಿಕ ಪಕ್ಷವನ್ನು ಅನೇಕರು ಶ್ರಮವಹಿಸಿ ಕಟ್ಟಿದ್ದಾರೆ. ನಾಯಕರು ಪಕ್ಷವನ್ನು ಮುನ್ನಡೆಸಿದ್ದಾರೆ. ಈಗ ಯುವಕರು ಪಕ್ಷದ ಜವಾಬ್ದಾರಿ ಹೊತ್ತುಕೊಳ್ಳುವ ಸಮಯ ಬಂದಿದೆ. ಹೀಗಾಗಿ ನಾನು ಓಡಾಡುತ್ತಿದ್ದೇನೆ. ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ ಎಂದು ಹೇಳಿದರು.
ಮಂಡ್ಯ ಕ್ಷೇತ್ರದ ಬಗ್ಗೆ ಮಾತನಾಡಲು ಇದು ಸೂಕ್ತ ಸಮಯವಲ್ಲ. ಅಲ್ಲಿನ ಮಾಜಿ ಶಾಸಕರು, ಪಕ್ಷದ ನಾಯಕರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾ ಎಂದರು.
ಸೆಪ್ಟೆಂಬರ್ 26ರಂದು ಕಾವೇರಿ ವಿಚಾರವಾಗಿ ಕರೆ ನೀಡಿರುವ ಬೆಂಗಳೂರು ಬಂದ್ ಗೆ ನಮ್ಮ ಬೆಂಬಲವಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement