ಏಷ್ಯನ್ ಗೇಮ್ಸ್: ಮತ್ತೊಂದು ಚಿನ್ನದ ಪದಕ ಗೆದ್ದ ಭಾರತ

ಹ್ಯಾಂಗ್ ಝೂ : ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಮತ್ತೊಂದು ಚಿನ್ನ ಗೆದ್ದಿದೆ. ಭಾರತದ ಮಹಿಳಾ ಕ್ರಿಕೆಟ್‌ ತಂಡ ಶ್ರೀಲಂಕಾವನ್ನು ಸೋಲಿಸಿ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ.
ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿತು. ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಶೆಫಾಲಿ ವರ್ಮಾ ಕೇವಲ 9 ರನ್​ಗಳಿಸಿ ಔಟಾದರು. ಈ ಹಂತದಲ್ಲಿ ಜೊತೆಗೂಡಿದ ಸ್ಮೃತಿ ಮಂಧಾನ ಹಾಗೂ ಜೆಮಿಮಾ ರೋಡ್ರಿಗಸ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು.
ಭಾರತವು 20 ಓವರ್ ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 116 ರನ್ ಗಳಿಸಿತು. ನಿಗದಿತ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡಕ್ಕೆ ಎಂಟು ವಿಕೆಟ್ ಕಳೆದುಕೊಂಡು 97 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಶ್ರೀಲಂಕಾ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement