ಐಫೋನ್ 15 ಖರೀದಿಸಿದರೆ ಆರು ತಿಂಗಳು ಫ್ರೀ ಪ್ಲಾನ್ ಘೋಷಿಸಿದ ರಿಲಯನ್ಸ್ ಜಿಯೋ…

ಹೊಸದಾಗಿ ಲಾಂಚ್ ಆಗಿರುವ ಆಪಲ್ ಐಫೋನ್ 15 ಖರೀದಿಯ ಮೇಲೆ ರಿಲಯನ್ಸ್ ಜಿಯೋ ಬಂಪರ್ ಆಫರ್ ಘೋಷಣೆ ಮಾಡಿದೆ.
ರಿಲಯನ್ಸ್ ರಿಟೇಲ್ ಸ್ಟೋರ್‌ಗಳು, ರಿಲಯನ್ಸ್ ಡಿಜಿಟಲ್ ಆನ್‌ಲೈನ್ ಅಥವಾ ಜಿಯೋಮಾರ್ಟ್ ನಲ್ಲಿ ಜಿಯೋ ಐಫೋನ್ 15 ಖರೀದಿ ಮಾಡಿದರೆ 2,394 ರೂ.ಗಳ ಮೌಲ್ಯದ ಆರು ತಿಂಗಳ ಪ್ಲಾನ್ ಅನ್ನು ಉಚಿತವಾಗಿ ಬಳಕೆದಾರರಿಗೆ ನೀಡಲಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬಳಕೆದಾರರ ನಾಡಿ ಮಿಡಿತವನ್ನು ಅರಿತು ಕೊಂಡಿರುವ ರಿಲಯನ್ಸ್ ಜಿಯೋ, ಆಪಲ್ ಐಫೋನ್ 15 ಖರೀದಿಸುವವರಿಗೆ 399 ರೂ. ಪ್ಲಾನ್ ಅನ್ನು ಆರು ತಿಂಗಳುಗಳ ವರೆಗೆ ಉಚಿತವಾಗಿ ನೀಡಲಿದೆ. ಆರು ತಿಂಗಳಿಗೆ ಇದರ ಒಟ್ಟು ಮೌಲ್ಯ 2,394 ರೂ.ಗಳಾಗಲಿದ್ದು, ಬಳಕೆದಾರರಿಗೆ ಹೆಚ್ಚಿನ ಲಾಭವನ್ನು ಮಾಡಿಕೊಡಲಿದೆ.
ರಿಲಯನ್ಸ್ ಜಿಯೋ, ಆಪಲ್ ಐಫೋನ್ 15 ಖರೀದಿಸುವವರಿಗೆ ನೀಡುತ್ತಿರುವ 399 ರೂ. ಪ್ಲಾನ್ ನಲ್ಲಿ ಬಳಕೆದಾರರಿಗೆ ಪ್ರತಿ ನಿತ್ಯ 3 ಜಿಬಿ ಹೈ ಸ್ಪೀಡ್ ಡೇಟಾ ಬಳಕೆಗೆ ದೊರೆಯಲಿದ್ದು, ಜೊತೆಗೆ ಸಂಪೂರ್ಣ ಅನ್ ಲಿಮಿಟೆಡ್ ಕಾಲಿಂಗ್ ಸಹ ಸಿಗಲಿದೆ. ಅಲ್ಲದೇ ಪ್ರತಿನಿತ್ಯ 100 ಎಸ್ಎಂಎಸ್ ಗಳನ್ನು ಸಹ ಉಚಿತವಾಗಿ ಕಳುಹಿಸಬಹುದಾಗಿದೆ.

ಪ್ರಮುಖ ಸುದ್ದಿ :-   ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’...

ಆದರೆ ರಿಲಯನ್ಸ್ ರಿಟೇಲ್ ಸ್ಟೋರ್‌ಗಳು, ರಿಲಯನ್ಸ್ ಡಿಜಿಟಲ್ ಆನ್‌ಲೈನ್ ಅಥವಾ ಜಿಯೋಮಾರ್ಟ್ ನಲ್ಲಿ ಜಿಯೋ ಐಫೋನ್ 15 ಖರೀದಿ ಮಾಡಿದರೆ ಮಾತ್ರವೇ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದುಎಂದು ತಿಳಿಸಲಾಗಿದೆ. ಜಿಯೋ ಬಳಕೆದಾರರಲಲ್ಲದವರಿಗೂ ಈ ಯೋಜನೆಯ ಲಾಭವು ದೊರೆಯಲಿದ್ದು, ಇದಕ್ಕಾಗಿ ಅವರು ಹೊಸ ಜಿಯೋ ಸಿಮ್ ಖರೀದಿ ಮಾಡಬೇಕು ಇಲ್ಲವೇ ಮೊಬೈಲ್ ನಂಬರ್ ಪೊರ್ಟಬಲಿಟಿ ಆಯ್ಕೆಯನ್ನು ತಮ್ಮದಾಗಿಸಿಕೊಳ್ಳಬೇಕಾಗಿದೆ.
ಈ ಪ್ಲಾನ್ ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದು, ಐಫೋನ್ 15 ಖರೀದಿ ಮಾಡಿ ಜಿಯೋ ಸಿಮ್ ಅನ್ನು ಆಕ್ಟಿವ್ ಮಾಡಿದರೆ ಈ ಹೊಸ ಯೋಜನೆಯು 72 ಗಂಟೆಗಳ ಒಳಗೆ ಬಳಕೆಗೆ ಲಭ್ಯವಾಗಲಿದೆ. ಈ ಯೋಜನಯೂ ಕೇವಲ ಐಫೋನ್ 15 ನಲ್ಲಿ ಮಾತ್ರವೇ ಕಾರ್ಯನಿರ್ವಹಿಸಲಿದೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement