ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ

ಬೆಂಗಳೂರು : ಕರ್ನಾಟಕ ಹಾಗೂ ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿಲ್ಲದಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದ್ದು ಇದರಿಂದಾಗಿ ರಾಜ್ಯದ ಜನತೆ ಹಾಗೂ ರೈತರಿಗೆ ಸಂಕಷ್ಟ ಎದುರಾಗಿದೆ.
ಮಳೆಯಾಗದ ಕಾರಣ ಕರ್ನಾಟಕದ ರೈತರಿಗೆ ನೀರಿನ ಕೊರೆತೆ ಎದುರಾಗಿದೆ, ಕರ್ನಾಟಕದಲ್ಲಿಯೇ ನೀರಿಲ್ಲ. ಕಾವೇರಿ ವಿವಾದ ಬಗೆಹರಿಸಲು ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಬೇಕು ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ : ರಾಜ್ಯ ಸರ್ಕಾರದ ಮಹತ್ವದ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement