ಕರ್ನಾಟಕಕ್ಕೆ ತಪ್ಪದ ಸಂಕಷ್ಟ: ಅಕ್ಟೋಬರ್‌ 15ರ ವರೆಗೆ 3000 ಕ್ಯೂಸೆಕ್ ನೀರು ಬಿಡಲು ಸಿಡಬ್ಲ್ಯುಆರ್​ಸಿ ಶಿಫಾರಸು

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದರ ವಿರುದ್ಧ ಬೆಂಗಳೂರಿನಲ್ಲಿ ಬಂದ್​​ ನಡೆಯುತ್ತಿರುವ ಮಧ್ಯೆಯೇ ಕಾವೇರಿ ನೀರು ನಿಯಂತ್ರಣ ಸಮಿತಿಯು ಕರ್ನಾಟಕ ಮತ್ತೆ ಶಾಕ್‌ ನೀಡಿದೆ.
ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸೆಪ್ಟೆಂಬರ್ 28ರಿಂದ ತಮಿಳುನಾಡಿಗೆ ಮುಂದಿನ 18 ದಿನಗಳ ಕಾಲ ಪ್ರತಿ ದಿನ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ‌ ಶಿಫಾರಸು ಮಾಡಿದೆ. ಅಕ್ಟೋಬರ್ 15 ರವರೆಗೂ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡಲು ಸಿಡಬ್ಲ್ಯುಆರ್​ಸಿ ಇಂದು ನಡೆದ ಸಭೆಯಲ್ಲಿ ಶಿಫಾರಸು ಮಾಡಿದೆ.ಈ ಹಿಂದಿನ ಆದೇಶಗಳಿಗೆ ಹೋಲಿಸಿದರೆ ತುಸು ಕಡಿಮೆ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುವಂತೆ ಶಿಫಾರಸು ಮಾಡಲಾಗಿದೆ.

ಕರ್ನಾಟಕ ಸರ್ಕಾರ 161 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. 34 ತಾಲೂಕುಗಳು ಭಾಗಶಃ ಬರಕ್ಕೆ ತುತ್ತಾಗಿವೆ. ಕಾವೇರಿ ಕೊಳ್ಳದಲ್ಲಿ ಶೇ 53 ಮಳೆ ಕೊರತೆ ಇದೆ. ಜಲಾಶಯಗಳಲ್ಲಿ ನೀರಿಲ್ಲ, ಇಂತಹ ಪರಿಸ್ಥಿತಿಯಲ್ಲಿ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ವಾದ ಮಂಡಿಸಿದ್ದರು. ಇದನ್ನು ಆಲಿಸಿದ ನಂತರ, 3000 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 28ರಿಂದ ಅಕ್ಟೋಬರ್ 15ರ ತನಕ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ.
ಈ ನಿರ್ದೇಶನವು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶ ವಿರೋಧಿಸಿ ನಡೆಯುತ್ತಿರುವ ಕನ್ನಡಿಗರ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಅಂಬಾರಿ ಹೊತ್ತಿದ್ದ ಆನೆ ಅರ್ಜುನನಿಗೆ ಭಾವಪೂರ್ಣ ವಿದಾಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement