ರಾಮದುರ್ಗ : ಬಸ್ ಪಲ್ಟಿ, 20ಕ್ಕೂ ಅಧಿಕ ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರಿಗೆ ಗಾಯ

ಬೆಳಗಾವಿ : ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ಇಂದು, ಮಂಗಳವಾರ ಬೆಳಗ್ಗೆ ಎನ್‌ ಡಬ್ಲ್ಯು ಕೆ ಆರ್‌ ಟಿ ಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಅಪಘಾತದಲ್ಲಿ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರಿಗೆ ಗಾಯಗೊಂಡಿದ್ದಾರೆ.
ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗ ಕಡೆ ಹೋಗುತ್ತಿದ್ದ ವೇಳೆ ಬಸ್ಸಿನ ಪ್ಲೇಟ್ ಕಟ್ ಆಗಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಬಸ್ಸಿನಲ್ಲಿ 50 ರಿಂದ 60 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಗಾಯಗೊಂಡವರನ್ನು ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಇತರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ : ಯಡವಟ್ಟಿನಿಂದ ಚಾಲಕನೇ ಇಲ್ಲದೆ ಗಂಟೆಗೆ 100 ಕಿಮೀ ವೇಗದಲ್ಲಿ 70 ಕಿಮೀ ದೂರ ಓಡಿದ ರೈಲು..: ಆಗಿದ್ದೇನೆಂದರೆ..| ವೀಕ್ಷಿಸಿ

ನಿಮ್ಮ ಕಾಮೆಂಟ್ ಬರೆಯಿರಿ

advertisement