ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ದನ (74 ವರ್ಷ) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದ್ದು ಇರಿಸಿ, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಕುಟುಂಬದ ಸಮೀಪವರ್ತಿಗಳಿಂದ ತಿಳಿದುಬಂದಿದೆ. ಇವರಿಗೆ ಆಂಜಿಯೋಗ್ರಾಂ ಆಪರೇಷನ್ ಮಾಡುವ ಸಾಧ್ಯತೆಯೂ ಇದೆ ಎಂದು ವರದಿಯಾಗಿದೆ.
ಕನ್ನಡ ಸಿನಿಮಾ,ಟಿವಿ ಗಳಲ್ಲಿ ಹಾಸ್ಯನಟನಾಗಿ ಗುರುತಿಸಿಕೊಂಡಿದ್ದ ಜನಾರ್ಧನ ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಅವರು ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟ ಬ್ಯಾಂಕ್ ಜನಾರ್ದನ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯವರು. ರಂಗಭೂಮಿ ಹಿನ್ನೆಲೆಯ ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ವಿಭಿನ್ನ ಶೈಲಿಯ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಹೆಸರು ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ