ಸೆಪ್ಟೆಂಬರ್‌ 28-29ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರ್ಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು (ಮಂಗಳವಾರ) ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಸೆಪ್ಟೆಂಬರ್‌ 29 ಮತ್ತು 30ರಂದು ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದೆ.
ಸೆ.29ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಸೆಪ್ಟೆಂಬರ್‌ 30ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಅಲ್ಲದೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಮುಂದಿನ 24 ತಾಸುಗಳಲ್ಲಿ (ಸೆ. 27ರ ಬೆಳಿಗ್ಗೆ ವರೆಗೆ ) ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement