ಮಧುಗಿರಿ ಬಳಿ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ಸಾವು

ತುಮಕೂರು : ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನ ಆಕಾಶ (20), ಹೇಮಂತ(28) ಹಾಗೂ ಶಿವಕುಮಾರ ಎಂದು ಗುರುತಿಸಲಾಗಿದೆ. ಮತ್ತೋರ್ವ ಉಜ್ವಲ್ ಕೃಷ್ಣ ಎಂಬಾತ ಗಾಯಗೊಂಡಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಬೆಂಗಳೂರಿನಿಂದ ಪಾವಗಡ ಕಡೆ, ಲಾರಿ ಪಾವಗಡದಿಂದ ತುಮಕೂರು ಕಡೆ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ಮೃತರೆಲ್ಲರೂ ಪಾವಗಡ ಮೂಲದವರು ಎನ್ನಲಾಗಿದೆ. ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

ನಿಮ್ಮ ಕಾಮೆಂಟ್ ಬರೆಯಿರಿ

advertisement