ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ನಿಧನ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲ ಅವರ ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತ ಶಾರದಾ ಪಾಟೀಲ ಅವರು, ಮಾಜಿ ಶಾಸಕ ಕೈಲಾಸನಾಥ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಶಾರದಾ ಪಾಟೀಲ ಅವರ ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲು ಕುಟಂಬಸ್ಥರು ತೀರ್ಮಾನಿಸಿದ್ದು, ಚಿಂಚೋಳಿಯಲ್ಲಿ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಬುಧವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಲಾಗಿದೆ. ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ ಅವರು 1997 ಮಾರ್ಚ್ 14 ರಂದು ನಿಧನರಾಗಿದ್ದರು.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸವದತ್ತಿ | ಸಿಡಿಲು ಬಡಿದು ಇಬ್ಬರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement