ನಾಗಮಂಗಲ ಬಳಿ ಕೆಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ : ಜಿಲ್ಲೆಯ ನಾಗಮಂಗಲ ತಾಲೂಕಿನ ಬಿ.ಜಿ.ನಗರ ಬಳಿಯ ಬೆಳ್ಳೂರು ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟಿದ್ದಾರೆ.
ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್​​​ಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.
ಮೃತರನ್ನು ಬೆಂಗಳೂರಿನ ಬೆಂಡಿಗನಹಳ್ಳಿಯ ನಮಿತಾ, ಬೆಂಗಳೂರಿನ ವಂಶಿಕೃಷ್ಣ, ಧಾರವಾಡದ ರಘುನಾಥ ಭಜಂತ್ರಿ, ಬೆಂಗಳೂರಿನಲ್ಲಿ ನಿವಾಸಿ ರಾಜಸ್ಥಾನ ಮೂಲದ ಪಂಕಜ ಶರ್ಮಾ ಎಂದು ಗುರುತಿಸಲಾಗಿದೆ.
ಬೆಂಗಳೂರು-ಮಂಗಳೂರು ಹೆದ್ದಾರಿಯ ನಾಗಮಂಗಲ ಸಮೀಪ ಈ ಭೀಕರ ಅಪಘಾತ ಸಂಭವಿಸಿದೆ. ಕೆಎಸ್ ಆರ್ ಟಿಸಿ ಬಸ್ಸು ಹಾಸನ ಕಡೆಯಿಂದ ಬೆಂಗಳೂರು ಕಡೆ ಬರುತ್ತಿತ್ತು. ಈ ವೇಳೆ ಆದಿಚುಂಚನಗಿರಿ ಮೆಡಿಕಲ್ ಆಸ್ಪತ್ರೆ ಎದುರು ಜನರನ್ನು ಇಳಿಸಲು ಬಸ್ ನಿಲ್ಲಿಸಲಾಗಿತ್ತು. ಈ ಸಂದರ್ಭದಲ್ಲಿ ವೇಗವಾಗಿ ಹಿಂದಿನಿಂದ ಬಂದ ಕಾರು ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ಬೆಳ್ಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪ್ರಮುಖ ಸುದ್ದಿ :-   ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement