ನಾಳೆ ಕರ್ನಾಟಕ ಬಂದ್ : ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ; ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಶುಕ್ರವಾರ (ಸೆಪ್ಟೆಂಬರ್‌ 29) ನಡೆಯುವ ಅಖಂಡ ಕರ್ನಾಟಕ ಬಂದ್ ಗೆ ನೂರಾರು ಸಂಘಟನೆಗಳು ಬೆಂಬಲ ಸೂಚಿಸಿವೆ.
ಕರ್ನಾಟಕ ಬಂದ್‌ ಇದ್ದರೂ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್ಸುಗಳು ಎಂದಿನಂತೆ ಸಂಚರಿಸಲಿವೆ. ಸಾರಿಗೆ ನಿಗಮಗಳು ತಮ್ಮ ನೌಕರರಿಗೆ ಮೌಖಿಕ ಸೂಚನೆ ನೀಡಿದ್ದು, ನೌಕರರು ಶುಕ್ರವಾರ (ಸೆಪ್ಟೆಂಬರ್‌ 29) ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಬೇಕು. ದೀರ್ಘಾವಧಿ ಹಾಗೂ ವಾರದ ರಜೆ ಹೊರತುಪಡಿಸಿ ಉಳಿದ ಎಲ್ಲಾ ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸೂಚಿಸಿದೆ.
ಸಾರಿಗೆ ನಿಗಮಗಳು ಅಗತ್ಯ ಸೇವೆಗಳ ಅಡಿಯಲ್ಲಿ ಬರುವುದರಿಂದ ಯಾರು ಸಹ ನಾಳಿನ ಬಂದ್ ನಲ್ಲಿ ಭಾಗಿಯಾಗುವಂತಿಲ್ಲ. ಒಂದು ವೇಳೆ ಕೆಲಸಕ್ಕೆ ಗೈರಾಗಿ ಬಂದ್‌ ನಲ್ಲಿ ಭಾಗಿಯಾದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಸಹ ನೀಡಲಾಗಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement