ಬೆಳಗಾವಿ: ಬೆಳಗಾಂ ಶುಗರ್ಸ್ ವತಿಯಿಂದ ಸೆಪ್ಟೆಂಬರ್ 29 ಹಾಗೂ 30 ರಂದು ಬೆಳಗಾವಿ ಜಿಲ್ಲೆಯಾದ್ಯಂತ ಮೋಡ ಬಿತ್ತನೆ ಕಾರ್ಯ ನಡೆಸಲು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರ( ಡಿಜಿಸಿಎ) ಕಚೇರಿಯು ಅನುಮತಿ ನೀಡಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ತಿಳಿಸಿದ್ದಾರೆ.
ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಬೆಳಗಾಂ ಶುಗರ್ಸ್ ಮೋಡ ಬಿತ್ತನೆಗೆ ಮುಂದಾಗಿದೆ. ಮೋಡ ಬಿತ್ತನೆ ಕಾರ್ಯಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರ(ಡಿಜಿಸಿಎ) ಕಚೇರಿಯು ಗ್ರೀನ್ ಸಿಗ್ನಲ್ ನೀಡಿದೆ.
ಸೆಪ್ಟೆಂಬರ್ 29 ಹಾಗೂ 30 ರಂದು ಮಧ್ಯಾಹ್ನ 1 ರಿಂದ 4 ಗಂಟೆ ವರೆಗೆ ಮೋಡ ಬಿತ್ತನೆ ನಡೆಯಲಿದೆ. ಕ್ಯಾಪ್ಟನ್ ವೀರೇಂದ್ರ ಸಿಂಗ್ ಹಾಗೂ ಕ್ಯಾಪ್ಟನ್ ಆದರ್ಶ ಪಾಂಡೆ ನೇತೃತ್ವದಲ್ಲಿ ವಿಟಿ-ಕೆಸಿಎಂ ವಿಮಾನವು ಮೋಡ ಬಿತ್ತನೆ ಮಾಡಲಿದೆ.


ನಿಮ್ಮ ಕಾಮೆಂಟ್ ಬರೆಯಿರಿ