ಅನ್ನಭಾಗ್ಯ ಯೋಜನೆ ; ಮುಂದಿನ ತಿಂಗಳಿಂದ ಹಣದ ಬದಲು ಅಕ್ಕಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮುಂದಿನ ತಿಂಗಳಿಂದ ಹಣದ ಬದಲು 10 ಕೆ.ಜಿ ಅಕ್ಕಿ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈಗಾಗಲೇ 10 ಕೆ.ಜಿ ಅಕ್ಕಿ ವಿತರಣೆ ಸಂಬಂಧ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಬರ ಪೀಡಿತ ತಾಲೂಕುಗಳಲ್ಲಿ ಹಣದ ಬದಲು ಅಕ್ಕಿಯನ್ನೇ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ಅಧಿಕಾರಕ್ಕೇರುವ ಮುನ್ನ ಪ್ರತಿಯೊಬ್ಬರಿಗೆ ತಲಾ 10 ಕೆ.ಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅಕ್ಕಿ ಕೊರತೆಯಿಂದಾಗಿ ಅಕ್ಕಿ ಬದಲಿಗೆ ಹಣ ನೀಡಲು ಮುಂದಾಗಿತ್ತು. ಪ್ರತಿ ತಿಂಗಳು 170 ರೂ.ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿತ್ತು. ಆದರೆ ಅಕ್ಕಿ ದಾಸ್ತಾನು ಹೆಚ್ಚಿಸಲು ನಿರಂತರ ಶ್ರಮ ಹಾಕಲಾಗಿತ್ತು. ಇದೀಗ ಮುಂದಿನ ತಿಂಗಳಿಂದ ಹಣದ ಬದಲು ಅಕ್ಕಿ ನೀಡುವುದಾಗಿ ಸಚಿವರು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement