ಕರ್ನಾಟಕ ಬಂದ್ : ನಾಳೆ ಬೆಂಗಳೂರಿನ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಬೆಂಗಳೂರು : ಶುಕ್ರವಾರ (ಸೆಪ್ಟೆಂಬರ್ 29) ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ವಿವಿಧ ಸಂಘಟನೆಗಳು 29-09-2023 ರಂದು ಕರ್ನಾಟಕ ಬಂದ್ ಘೋಷಿಸಿವೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಚಳವಳಿ (ವಾಟಾಳ್ ಪಕ್ಷ) ಹಾಗೂ ವಿವಿಧ ರೈತ ಸಂಘಟನೆಗಳು ಸೇರಿದಂತೆ ವಿವಿಧ ಕನ್ನಡ ಸಂಘಟನೆಗಳ ‘ಕನ್ನಡ ಒಕ್ಕೂಟ’ ಶುಕ್ರವಾರ ರಾಜ್ಯಾದ್ಯಂತ ಶುಕ್ರವಾರ ಮುಂಜಾನೆಯಿಂದ ಮುಸ್ಸಂಜೆ ವರೆಗೆ ಬಂದ್‌ಗೆ ಕರೆ ನೀಡಿದೆ.
ಮೂಲಗಳ ಪ್ರಕಾರ ಬಂದ್ ನಿಂದಾಗಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಸಾರಿಗೆ ವ್ಯವಸ್ಥೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳಿಂದ ಮಾತ್ರ ಬಸ್ಸುಗಳು ಒಳಬರುವ ಪ್ರಯಾಣಿಕರನ್ನು ಕರೆದೊಯ್ಯಲಿವೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement