ಕರ್ನಾಟಕ ಬಂದ್‌ : ಶಾಲಾ-ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಸೆಪ್ಟಂಬರ್ 29ರಂದು, ಶುಕ್ರವಾರ ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆಯು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಿದೆ.
ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ಇಲ್ಲ. ಸ್ಥಳೀಯ ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚಿಸಿದೆ. ಇನ್ನು ಜಿಲ್ಲಾಧಿಕಾರಿಗಳು ರಜೆ ನೀಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಖಾಸಗಿ ಶಾಲೆ ಸಂಘಟನೆಗಳು ಮನವಿ ಮಾಡಿವೆ.
ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಹಾಗೂ ಶಾಲೆಗಳಿಗೆ ರಜೆ ನೀಡುವ ನಿರ್ಧಾರವನ್ನು ಆಯಾ ಶಾಲಾ ಆಡಳಿತ ಮಂಡಳಿಗೆ ಬಿಟ್ಟಿದೆ.
ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳು ರಜೆ ನೀಡಬಹುದು ಎಂದು ಹೇಳಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement