ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದು. ಈಗ ನಾರಿ ಶಕ್ತಿ ವಂದನ ಅಧಿನಿಯಮ ಭಾರತದಲ್ಲಿ ಕಾನೂನು ಆಯಿತು.
ಈಗ ಕಾಯಿದೆಯಾಗುತ್ತಿದ್ದಂತೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾಗಲಿವೆ. ಆದರೆ, ಹೊಸ ಜನಗಣತಿ ಮತ್ತು ಡಿಲಿಮಿಟೇಶನ್ ನಂತರ ಮೀಸಲಾತಿ ಜಾರಿಗೆ ಬರಲಿದೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ, ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆ ಮತ್ತು ರಾಜ್ಯಸಭೆ ಈ ತಿಂಗಳು ಅಂಗೀಕರಿಸಿತು, ಇದು ಸೆಪ್ಟೆಂಬರ್ 19 ರಂದು ಹೊಸ ಸಂಸತ್ತಿನ ಕಟ್ಟಡಕ್ಕೆ ತನ್ನ ಕಾರ್ಯಾಚರಣೆಯನ್ನು ಬದಲಾಯಿಸಿದ ನಂತರ ಭಾರತೀಯ ಸಂಸತ್ತಿನ ಐತಿಹಾಸಿಕ ಈ ಮಹಿಳಾ ಮೀಸಲು ವಿಧೇಯಕಕ್ಕೆ ಅನುಮೋದನೆ ನೀಡಿದೆ.
ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನ ಅಧೀನಂ’ ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿದ್ದು, ನೂತನ ಸಂಸತ್ ಭವನದಲ್ಲಿ ಅಂಗೀಕಾರಗೊಂಡ ಮೊದಲ ಮಸೂದೆಯಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ