ಕನ್ನಡದ ‘ಕಪ್ಪೆರಾಗ-ಕುಂಬಾರನ ಹಾಡು’ ಕಿರುಚಿತ್ರಕ್ಕೆ ಗ್ರೀನ್ ಆಸ್ಕರ್ ಪ್ರಶಸ್ತಿ

ಬೆಂಗಳೂರು : ಪಶ್ಚಿಮ ಘಟ್ಟದಲ್ಲಿ ಕಂಡುಬರುವ ‘ಕುಂಬಾರ ಕಪ್ಪೆ’ ಕುರಿತು ನಿರ್ಮಾಣ ಮಾಡಿರುವ ‘ಕಪ್ಪೆರಾಗ-ಕುಂಬಾರನ ಹಾಡು’ ಎಂಬ ಕನ್ನಡ ಕಿರುಚಿತ್ರಕ್ಕೆ ‘ಜ್ಯಾಕ್ಸನ್ ವೈಲ್ಡ್ ಮೀಡಿಯಾ’ ಪ್ರಶಸ್ತಿ ಲಭಿಸಿದೆ.
ಕುಂಬಾರ ಕಪ್ಪೆಯನ್ನು ನಿಶಾಚಾರಿ ಕಪ್ಪೆ ಎಂದೂ ಕರೆಯಲಾಗುತ್ತದೆ. ನಿರ್ದೇಶಕ ಪ್ರಶಾಂತ್ ಎಸ್. ನಾಯಕ್ ಅವರು ನಿರ್ಮಾಣ ಮಾಡಿರುವ ‘ಕುಂಬಾರ ಕಪ್ಪೆ’ ಚಲನಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಖ್ಯಾತಿ ಪಡೆದಿರುವ ‘ಜ್ಯಾಕ್ಸನ್ ವೈಲ್ಡ್ ಮೀಡಿಯಾ’ದ ಅತ್ಯುತ್ತಮ ಪ್ರಾಣಿ ವರ್ತನೆ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.

“ಕಿರುಚಿತ್ರವನ್ನು ಜಗತ್ತಿನಲ್ಲಿರುವ 8 ಕೋಟಿ ಕನ್ನಡ ಮಾತನಾಡುವ ಜನರಿಗೆ ಹಾಗೂ ಭಾರತದ 150 ಕೋಟಿ ಜನರಿಗೆ ಅರ್ಪಣೆ ಮಾಡಿದ್ದೇನೆ” ಎಂದು ನಿರ್ದೇಶಕ ಪ್ರಶಾಂತ್ ಎಸ್. ನಾಯಕ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
“ಸಂಗೀತ, ಸಾಹಿತ್ಯ ಸೇರಿದಂತೆ ಅನಾದಿ ಕಾಲದಿಂದಲೂ ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಕನ್ನಡ ನಾಡು ನಿಸರ್ಗದತ್ತವಾಗಿಯೂ ಸಂಪದ್ಭರಿತವಾಗಿದೆ. ಇಂಥ ನಾಡಿನ ಕನ್ನಡ ಚಿತ್ರಕ್ಕೆ ಇದೇ ಮೊದಲ ಬಾರಿಗೆ ಜ್ಯಾಕ್ಸನ್ ವೈಲ್ಡ್ ಮೀಡಿಯಾ ಪ್ರಶಸ್ತಿ ಲಭಿಸಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಕಿರುಚಿತ್ರಕ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಪ್ರತಿಷ್ಠಿತ ಜಾಕ್ಸನ್ ವೈಲ್ಡ್ ಅವಾರ್ಡ್‌ಗೆ ಭಾಜನವಾಗಿರುವ ಕನ್ನಡದ ಮೊದಲ ‘ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯು ಫಿಲಂ’ ಕಪ್ಪೆರಾಗ ಚಿತ್ರತಂಡಕ್ಕೆ ಅಭಿನಂದನೆಗಳು. ಕರುನಾಡಿನ ಪ್ರತಿಭೆಗಳ ಪರಿಶ್ರಮದ ಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಹೆಸರುವಾಸಿಯಾಗಿರುವ ಜಾಕ್ಸನ್ ವೈಲ್ಡ್ ಅವಾರ್ಡ್ ‌ನಂತ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ದೊರೆತದ್ದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿ. ಚಿತ್ರದ ನಿರ್ದೇಶಕ ಪ್ರಶಾಂತ್ ಎಸ್. ನಾಯ್ಕ ಮತ್ತವರ ತಂಡದ ಸಾಧನೆ ನಾಡಿನ ಯುವ ನಿರ್ದೇಶಕರಿಗೆ ಪ್ರೇರಣೆಯಾಗಲಿ, ಇಂಥ ಇನ್ನಷ್ಟು ಚಿತ್ರಗಳು ನಮ್ಮಲ್ಲಿ ಮೂಡಿಬಂದು, ಕನ್ನಡದ ಕಲರವ ಜಗದಗಲ ಮೊಳಗಲಿ ಎಂದು ಹಾರೈಸುತ್ತೇನೆ” ಎದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಮನೆಯಲ್ಲೇ ಕಾಡುಕೋಣದ ಮಾಂಸ, ಜಿಂಕೆ ಕೊಂಬು ಇರಿಸಿಕೊಂಡಿದ್ದ ಇಬ್ಬರ ಬಂಧನ

ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಅವರು ಸಹ ಎಕ್ಸ್‌ ವೇದಿಕೆಯಲ್ಲಿ ಗ್ರೀನ್‌ ಆಸ್ಕರ್‌ ಪ್ರಶಸ್ತಿ ಗೆದ್ದಿರುವ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಪಶ್ಚಿಮ ಘಟ್ಟದಲ್ಲಿ ಕಂಡುಬರುವ ‘ಕುಂಬಾರ ಕಪ್ಪೆ’ ಎಂಬ ನಿಶಾಚರಿ ಕಪ್ಪೆಯ ಕುರಿತು ಕನ್ನಡಿಗರು ನಿರ್ಮಿಸಿರುವ ‘ಕಪ್ಪೆರಾಗ-ಕುಂಬಾರನ ಹಾಡು’ ಸಾಕ್ಷ್ಯಚಿತ್ರ, ಗ್ರೀನ್ ಆಸ್ಕರ್ ಎಂದೇ ಹೆಸರಾದ ಪ್ರತಿಷ್ಟಿತ ‘ಜ್ಯಾಕ್ಸನ್ ವೈಲ್ಡ್ ಮೀಡಿಯಾ’ ಪ್ರಶಸ್ತಿಗೆ ಭಾಜನವಾಗಿದೆ. ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ ಚಿತ್ರ ನಿರ್ಮಿಸಿದ ತಂಡಕ್ಕೆ ಅಭಿನಂದನೆಗಳು ಎಂದು ಅವರು ಬರೆದಿದ್ದಾರೆ.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement